ಪಾಕಿಸ್ತಾನದ ಉಗ್ರ ಸಂಘಟನೆ ಯೊಂದಿಗೆ ನಂಟಿನ ಶಂಕೆಯಿಂದಾಗಿ ರಾಷ್ಟ್ರೀಯ ತನಿಖಾ ದಳ ದೆಹಲಿ, ಕೇರಳ, ಕರ್ನಾಟಕ ಸೇರಿದಂತೆ ಹತ್ತು ಕಡೆಗಳಲ್ಲಿ ಸೋಮವಾರ ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದುಕೊಂಡಿದೆ.
ಪಾಕಿಸ್ತಾನದ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯೊಂದಿಗೆ ನಂಟು ಇಟ್ಟುಕೊಂಡು ದುಷ್ಕೃತ್ಯ ಎಸಗಲು ಯೋಜನೆ ಹಾಕಿದ್ದ ಶಂಕೆಯಲ್ಲಿ ಭಾರತದ ಆರೇಳು ಮಂದಿ ಮೇಲೆ ಗುಪ್ತಚರ ಇಲಾಖೆ ನಿಗಾ ಇರಿಸಿತ್ತು. ಸದ್ಯಕ್ಕೆ ಐದು ಮಂದಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರೆಸಲಾಗಿದೆ.
ಪಾಕಿಸ್ತಾನಿ ಸಂಘಟನೆಗಳೊಂದಿಗೆ ಈ ಐವರು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದರು.ಪಾಕಿಸ್ತಾನವು ಸಾಮಾಜಿಕ ಜಾಲತಾಣದ ಮೂಲಕ ಭಾರತದ ಯುವಕರೊಂದಿಗೆ ಸಂಪರ್ಕ ಸಾಧಿಸಿ, ಆನ್‌ಲೈನ್‌ನಲ್ಲಿಯೇ ತರಬೇತಿ ನೀಡುತ್ತಿತ್ತು. ಸ್ಥಳೀಯವಾಗಿ ದಾಳಿ ನಡೆಸಲು ಅವರನ್ನು ಪ್ರೇರೇಪಿಸಲಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ