ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ-20 ಸರಣಿಯ ಉಳಿದ ಮೂರು ಪಂದ್ಯಗಳನ್ನು ಪ್ರೇಕ್ಷಕರಿಲ್ಲದೇ ನಡೆಸಲು ಬಿಸಿಸಿಐ ನಿರ್ಧರಿಸಿದೆ.
ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಮುನ್ನೆಚ್ಚರಿಕೆ ಕ್ರಮವಾಗಿ ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
ಈ ಕುರಿತಂತೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಬಿಸಿಸಿಐ ವಕ್ತಾರರು, ಉಳಿದ ಟಿ-20 ಪಂದ್ಯಗಳನ್ನು ಪ್ರೇಕ್ಷಕರಿಲ್ಲದೇ ನಡೆಸಲು ತೀರ್ಮಾನಿಸಿದ್ದೇವೆ. ಕ್ರಿಕೆಟನ್ನು ಪ್ರೀತಿಸುವ ಅಭಿಮಾನಿಗಳಿಗಾಗಿಯೇ ಈ ನಿರ್ಧಾರವನ್ನು ಮಾಡಿದ್ದೇವೆ ಎಂದರು.
ಅಭಿಮಾನಿಗಳ ರಕ್ಷಣೆಯೇ ನಮ್ಮ ಪ್ರಮುಖ ಆದ್ಯತೆ. ವೈರಸ್ ವಿರುದ್ಧ ಹೋರಾಟ ಮಾಡಲು ಇದು ಮಹತ್ವದ ನಡೆಯಾಗಿದೆ ಎಂದು ಹೇಳಿದ್ದಾರೆ.
ಈಗಾಗಲೇ ಟಿಕೆಟ್ ಬುಕ್ ಮಾಡಿರುವವರಿಗೆ ಹಣವನ್ನು ಹಿಂತಿರುಗಿಸಲಾಗುವುದು ಎಂದಿದ್ದಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ