February 21, 2026

Newsnap Kannada

The World at your finger tips!

ganapathi

ಕನ್ನಡಿಗ, ಐಪಿಎಸ್ ಅಧಿಕಾರಿ ಎಂ.ಎ. ಗಣಪತಿ ಎನ್‌ಎಸ್‌ಜಿ ಮಹಾನಿರ್ದೇಶಕರಾಗಿ ನೇಮಕ

Spread the love

ಕರ್ನಾಟಕದ ಕೊಡಗು ಮೂಲದ ಹಿರಿಯ ಐಪಿಎಸ್ ಅಧಿಕಾರಿ ಎಂ ಎ ಗಣಪತಿ ಅವರನ್ನು ರಾಷ್ಟ್ರೀಯ ಭದ್ರತಾ ಸಿಬ್ಬಂದಿಯ (ಎನ್‌ಎಸ್‌ಜಿ) ಮಹಾನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್ ನೇಮಕಾತಿ ಸಮಿತಿಯು ಗಣಪತಿ ಅವರ ನೇಮಕಾತಿಗೆ ಅನುಮೋದನೆ ನೀಡಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಇದೇವೇಳೆ, ಪಶ್ಚಿಮ ಬಂಗಾಳದ ಕೇಡರ್‌ನ 1986 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಕುಲದೀಪ್ ಸಿಂಗ್ ಅವರನ್ನು ಸಿಆರ್‌ಪಿಎಫ್ ಮಹಾನಿರ್ದೇಶಕರಾಗಿ ಕ್ಯಾಬಿನೆಟ್ ನೇಮಕಾತಿ ಸಮಿತಿಯು ನೇಮಕ ಮಾಡಿದೆ. ಪ್ರಸ್ತುತ ಅವರು ಸಿಆರ್‌ಪಿಎಫ್‌ನ ವಿಶೇಷ ಡಿಜಿ ಆಗಿದ್ದಾರೆ.

ಎನ್‌ಎಸ್‌ಜಿ ಮಹಾನಿರ್ದೇಶಕರಾಗಿ ನೇಮಕವಾಗಿರುವ ಗಣಪತಿ ಅವರು ಪ್ರಸ್ತುತ, ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿಯ ಮಹಾನಿರ್ದೇಶಕರಾಗಿದ್ದಾರೆ.

error: Content is protected !!