ಅಕ್ರಮ ಸ್ಫೋಟಕಗಳನ್ನು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ 5 ಜನರನ್ನು ಬಂಧಿಸಿ ಸ್ಪೋಟಕಗಳನ್ನು ವಶಪಡಿಸಿ ಕೊಂಡ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೀನಪ್ಪನದೊಡ್ಡಿ ಗ್ರಾಮದಲ್ಲಿ ಜರುಗಿದೆ.
ಸೀನಪ್ಪನದೊಡ್ಡಿ ಗ್ರಾಮದಲ್ಲಿ ಹಲವು ದಿನಗಳಿಂದ ಕ್ವಾರೆಯಲ್ಲಿ ಕಲ್ಲು ಸಿಡಿಸಲು ಗನ್‍ಪೌಡರ್, ಜಿಲೆಟಿನ್ ಕಡ್ಡಿ, ಡಿಟೋನೇಟರ್ ಸೇರಿ ಇನ್ನಿತರ ಸ್ಪೋಟಕಗಳನ್ನು ಮಾರಾಟ ಮಾಡುವುದರ ಜೊತೆಗೆ ಸ್ಫೋಟಕ್ಕೂ ಬಳಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಈ ದಾಳಿ ಮಾಡಲಾಗಿತ್ತು.
ಬುಧವಾರ ಸಂಜೆ ಇದ್ದಕ್ಕಿದ್ದಂತೆ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು, ಸ್ಫೋಟಕಗಳ ಸಮೇತ ಆರೋಪಿಗಳನ್ನು ಹಿಡಿದಿದ್ದಾರೆ. ಈ ಸ್ಥಳದಲ್ಲಿ ಇದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ಕ್ವಾರೆಯಲ್ಲಿ ಕಲ್ಲು ಸಿಡಿಸಲು ಗನ್‍ಪೌಡರ್, ಜಿಲೆಟಿನ್ ಕಡ್ಡಿ, ಡಿಟೋನೇಟರ್ ಸೇರಿ ಇನ್ನಿತರ ಸ್ಫೋಟಕಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾದೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ