ರಾಜ್ಯದ ಎರಡು ವಿಧಾನಸಭಾ ಕ್ಷೇತ್ರ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ನಿಗದಿಗೂ ಮುನ್ನ ಅಭ್ಯರ್ಥಿಯ ಹೆಸರನ್ನು ಕಾಂಗ್ರೆಸ್ ಪ್ರಕಟಿಸಿದೆ.
ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ? :
- ಬಸವಕಲ್ಯಾಣ- ಶ್ರೀಮತಿ ಮಲ್ಲಮ್ಮ (ದಿ.ನಾರಾಯಾಣ್ ರಾವ್ ಪತ್ನಿ)
- ಮಸ್ಕಿ – ಬಸನಗೌಡ ತುರುವಿಹಾಳ
- ಸಿಂದಗಿ – ಅಶೋಕ್ ಮನಗೂಳಿ (ದಿ.ಎಂ.ಸಿ.ಮನಗೂಳಿ ಪುತ್ರ)
ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿಲ್ಲ. ಶುಕ್ರವಾರ ಸಂಜೆಯೊಳಗೆ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಪ್ರಕಟವಾಗುವ ಸಾಧ್ಯತೆಗಳಿವೆ.
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಸತೀಶ್ ಜಾರಕಿಹೊಳಿ ಹೆಸರು ಕಾಂಗ್ರೆಸ್ ಅಂತ್ಯ ಗೊಳಿಸುವ ಸಾಧ್ಯತೆ ಇದೆ.
ಮೂರು ಕ್ಷೇತ್ರಗಳ ಮತದಾನ ಮೇ 2 ರಂದು ನಡೆಯಲಿದೆ. ಮಾರ್ಚ್ 30 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 4 ನಾಮಪತ್ರ ಹಿಂತೆಗೆತಕ್ಕೆ ಕೊನೆಯ ದಿನವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ