ಮೈಸೂರು ಮೃಗಾಲಯದ ಪ್ರಾಣಿಗಳಿಗಾಗಿ ಶವರ್ ಬಾತ್ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಬೇಸಿಗೆ ಬಿಸಿಲಿನ ಧಗೆಯನ್ನು ತಗ್ಗಿಸುವ ಪ್ರಯತ್ನ ಅಧಿಕಾರಿಗಳದ್ದು.
ಮೈಸೂರಿನಲ್ಲಿ ಬಿಸಿಲ ಬೇಗೆ ದಿನೇ ದಿನೇ ಹೆಚ್ಚುತ್ತಿದೆ. ಬೇಸಿಗೆ ಜನರನ್ನು ಮಾತ್ರವಲ್ಲ ಪ್ರಾಣಿಗಳಿಗೂ ಸಂಕಷ್ಟ ತಂದೊಡ್ಡಿದೆ. ಅದರಲ್ಲೂ ಪಕ್ಷಿಗಳು ಹನಿ ಹನಿಗೂ ಪರದಾಡುತ್ತಿವೆ. ಆದರೆ ಈ ಬಿರು ಬೇಸಿಗೆಯಲ್ಲೂ ಮೃಗಾಲಯದ ಪ್ರಾಣಿ-ಪಕ್ಷಿಗಳನ್ನು ತಂಪಾಗಿಡುವ ಹೊಸ ಪ್ರಯತ್ನ ಮೆಚ್ಚುಗೆಗೆ ಕಾರಣವಾಗಿದೆ.

ಮೈಸೂರು ಮೃಗಾಲಯದಲ್ಲಿ ಅಳವಡಿಸಿರುವ ನೀರು ಸಿಂಪಡಿಸುವ ಯಂತ್ರಗಳು ಮತ್ತು ಆನೆಗಳಿಗಾಗಿ ವಿಶೇಷವಾಗಿ ಸಿದ್ಧಪಡಿಸಿರುವ ಶವರ್ ವ್ಯವಸ್ಥೆ ಇದೆ. ಅಧಿಕಾರಿಗಳು, ಮೃಗಾಲಯದ ಪ್ರಾಣಿಗಳಿಗೆ ಸ್ಪ್ರಿಂಕ್ಲರ್ನ ಅಳವಡಿಸಿದ್ದಾರೆ. ಈ ಮೂಲಕ ಪ್ರಾಣಿಗಳ ಮೇಲೆ ನೀರಿನ ಸಿಂಚನ ಮಾಡಲಾಗುತ್ತಿದೆ. ಪ್ರಾಣಿಗಳು ಕೂಲಾಗಿರುವಂತೆ ನೋಡಿಕೊಳ್ಳಲಾಗುತ್ತಿದೆ.
ಮಧ್ಯಾಹ್ನದ ವೇಳೆ ಈ ಸ್ಪ್ರಿಂಕ್ಲರ್ ಆರಂಭ :
ನೀರಿನ ಸ್ಪ್ರಿಂಕ್ಲರ್ನ ಪ್ರತಿಯೊಂದು ಪ್ರಾಣಿಯ ಬೋನ್ ಬಳಿಯೂ ಅಳವಡಿಸಲಾಗಿದೆ. ಮಧ್ಯಾಹ್ನದ ವೇಳೆ ಈ ಸ್ಪ್ರಿಂಕ್ಲರ್ ಆನ್ ಮಾಡಲಾಗುತ್ತೆ. ಸ್ಪ್ರಿಂಕ್ಲರ್ಗಳಿಂದ ಚಿಮ್ಮುವ ನೀರನ್ನು ಝೂನ ಪ್ರಾಣಿಗಳು ಎಂಜಾಯ್ ಮಾಡುತ್ತಿವೆ.

ಜೊತೆಗೆ ಬೇಸಿಗೆ ಹಿನ್ನೆಲೆ ಪ್ರಾಣಿಗಳ ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಲಾಗಿದೆ. ಸಸ್ಯಹಾರಿ ಪ್ರಾಣಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಹಣ್ಣು ನೀಡಲಾಗುತ್ತಿದೆ.

ಪ್ರಾಣಿಗಳಿಗೂ ಎಳ ನೀರು :
ಎಳನೀರು ಸೇರಿದಂತೆ ದ್ರವರೂಪದ ಪದಾರ್ಥಗಳನ್ನು ನೀಡಲಾಗುತ್ತಿದೆ. ಪ್ರಾಣಿಗಳ ಆರೋಗ್ಯದ ದೃಷ್ಟಿಯಿಂದ ಝೂ ಆಡಳಿತ ಆಧಿಕಾರಿಗಳು ಕ್ರಮಕೈಗೊಂಡಿದ್ಧಾರೆ. ಬೇಸಿಗೆ ಅಂತ್ಯವಾಗುವವರೆಗೆ ಈ ರೀತಿ ಪ್ರಾಣಿಗಳಿಗೆ ಕೊಡುವ ಆಹಾರ ಪದ್ಧತಿಯಲ್ಲು ಬದಲಾವಣೆ ಇರುತ್ತದೆ.
ಅಧಿಕಾರಿಗಳ ಈ ಎಲ್ಲಾ ಪ್ರಯತ್ನಕ್ಕೆ ಪ್ರವಾಸಿಗರು ಕೂಡ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ