December 24, 2024

Newsnap Kannada

The World at your finger tips!

army11

ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಗುಂಡಿಗೆ ನಾಲ್ವರು ಉಗ್ರರು ಬಲಿ

Spread the love

ನಾಲ್ವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದಿರುವ ಘಟನೆ ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೋಮವಾರ ಜರುಗಿದೆ.

ಭಯೋತ್ಪಾದಕರಿಗೆ ಶರಣಾಗುವಂತೆ ಭದ್ರತಾ ಪಡೆ ಹೇಳಿದಾಗ ಉಗ್ರರು ನಿರಾಕರಿಸಿ,. ಗುಂಡಿನ ಚಕಮಕಿ ನಡೆಸಿದರು. ಈ ಘಟನೆಯಲ್ಲಿ ನಾಲ್ವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಸೇನಾ ಅಧಿಕಾರಿಗಳು ಹೇಳಿದ್ದಾರೆ.

ಉಗ್ರರ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಭದ್ರತಾ ಪಡೆಗಳು ಮಧ್ಯರಾತ್ರಿ ಜಿಲ್ಲೆಯ ಮಣುಹಾಲ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿತು.

ಈ ವೇಳೆ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಲು ಆರಂಭಿಸಿದರು. ಬಳಿಕ ಒಂದೆರಡು ಗಂಟೆಗಳ ಕಾಲ ಭಯೋತ್ಪಾದಕರು ಹಾಗೂ ಭದ್ರತಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು. ಕೊನೆಯಲ್ಲಿ ಸೇನೆಯ ದಾಳಿಗೆ ಉಗ್ರರು ಹತರಾದರು.‌ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!