ರಮೇಶ್ ವಿರುದ್ಧ ರೇಪ್ ಕೇಸ್: 6 ಮಂದಿ ಸಚಿವರ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

Team Newsnap
1 Min Read

ಸಿಡಿ ಸಂತ್ರಸ್ತೆಯ ಹೇಳಿಕೆ ಆಧರಿಸಿ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‍ಐಆರ್ ದಾಖಲಿಸಬೇಕು. ಈಗಾಗಲೇ ಕೋರ್ಟಿಗೆ ಹೋಗಿರುವ 6 ಮಂದಿ ಸಚಿವರು ರಾಜೀನಾಮೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಆಗ್ರಹಿಸಿದರು.

ಬೆಂಗಳೂರಿನ ಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಮ್ಮ ಬೇಡಿಕೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸದನದಲ್ಲಿ ಹೋರಾಟ ಮುಂದುವರಿಯುತ್ತೆ ಎಂದರು.

6 ಸಚಿವರೂ ರಾಜೀನಾಮೆ ಕೊಡಬೇಕು:

ಸಂತ್ರಸ್ತೆ ಹೇಳಿಕೆ ಆಧರಿಸಿ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‍ಐಆರ್ ದಾಖಲಿಸಬೇಕು. ಅಲ್ಲಿಯವರೆಗೂ ಹೋರಾಟ ಮುಂದುವರಿಸುತ್ತೇವೆ. ಸರ್ಕಾರ ಪ್ರಕರಣ ನಿಭಾಯಿಸಲು ವಿಫಲವಾಗಿದೆ. ತಾರತಮ್ಯ ಧೋರಣೆ ಸರಿಯಲ್ಲ ಎಂಸು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮಾಜಿ ಸಚಿವರ ರಾಸಲೀಲೆ ಸಿಡಿ ಹೊರಬರುತ್ತಿದ್ದಂತೆಯೇ 6 ಮಂದಿ ಸಚಿವರು ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡಬಾರದು ಎಂದು ಕೋರ್ಟ್ ಮೊರೆ ಹೋಗಿದ್ದರು.

ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಕೆ.ಸುಧಾಕರ್, ನಾರಾಯಣಗೌಡ, ಭೈರತಿ ಬಸವರಾಜ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಬೇಕೆಂದು ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಆರು ಸಚಿವರಿಗೆ ಭೀತಿ ಹುಟ್ಟಿರುವುದು ಏಕೆ ಎಂಬ ಪ್ರಶ್ನೆಗೆ ಇದುವರೆಗೂ ಉತ್ತರ ಸಿಕ್ಕಿಲ್ಲ ಎಂದರು.

Share This Article
Leave a comment