ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ದಾಸ್ಯಕ್ಕೆ ಒಳಗಾಗದೇ, ಅವುಗಳಿಂದ ದೂರ ಇರಬೇಕು. ಮೊಬೈಲ್ ಬಳಕೆಯ ಬಗ್ಗೆಯೂ ಎಚ್ಚರಿಕೆಯಿಂದ ಇರುವಂತೆ ಶಂಕರಗೌಡ ಶಿಕ್ಷಣ ಮಹಾವಿದ್ಯಾಲಯದ ನಿಕಟಪೂರ್ವ ಪ್ರಾಂಶುಪಾಲ ಹಾಗೂ ಹಿರಿಯ ಪ್ರಾಧ್ಯಾಪಕರಾದ ಡಾ. ಕೆ.ಸಿ.ಚನ್ನಕೃಷ್ಣಯ್ಯರವರು ಕರೆ ನೀಡಿದರು.
ಮಂಡ್ಯ ನಗರದ ಪಿಇಎಸ್ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ ಸಿ ಫಲಿತಾಂಶವನ್ನು ಉತ್ತಮ ಪಡಿಸುವ ಸಲುವಾಗಿ ಇಂದು ನಡೆದ ಶಿಕ್ಷಕರ ಶಾಲಾ ವಾಸ್ತವ್ಯ ವಿನೂತನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಏಕೆ ಓದಬೇಕು ಮತ್ತು ಹೇಗೆ ಓದಬೇಕು ಎಂಬುದರ ಬಗ್ಗೆ ಮಕ್ಕಳಿಗೆ ಉದಾಹರಣೆಯ ಮೂಲಕ ಮನವರಿಕೆ ಮಾಡಿಕೊಟ್ಟರು.
ಪರೀಕ್ಷೆಗೆ ಇನ್ನೂ 90 ದಿನಗಳು ಉಳಿದಿದ್ದು, ಇಂದಿನಿಂದಲೇ ಶ್ರಮವಹಿಸಿ ಪ್ರತಿದಿನ ಕನಿಷ್ಟ 6 ಗಂಟೆಗಳ ಕಾಲ ಅಭ್ಯಾಸ ಮಾಡಿದರೆ, ಹೆಚ್ಚು ಅಂಕ ಗಳಿಸಿ, ಉತ್ತೀರ್ಣರಾಗಬಹುದು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ಮಂಡ್ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಶಿಕ್ಷಕ ಶಿವಣ್ಣಮಂಗಲ ಮಾತನಾಡಿ, ಶಾಲಾ ವಾಸ್ತವ್ಯ ಕಾರ್ಯಕ್ರಮವು ಶಿಕ್ಷಣ ಇಲಾಖೆಯ ವಿನೂತನ ಕಾರ್ಯಕ್ರಮವಾಗಿದ್ದು, ಇದು ಮಕ್ಕಳ ಕಲಿಕೆಗೆ ಪ್ರೇರಣಾತ್ಮಕವಾಗಿದ್ದು, ಶಿಕ್ಷಕರು, ಪೋಷಕರು, ಮಕ್ಕಳು ಮತ್ತು ಸಮುದಾಯದ ಒಟ್ಟು ಸಹಕಾರದಿಂದ ಉತ್ತಮ ಫಲಿತಾಂಶ ಪಡೆಯಬಹುದಾಗಿದೆ ಎಂದು ಸಲಹೆ ನೀಡಿದರು
ವಿದ್ಯಾರ್ಥಿಗಳು ಸಮಯದ ಸದುಪಯೋಗ ಮಾಡಿಕೊಂಡು ಏಕಾಗ್ರತೆಯಿಂದ ಕಲಿಕೆಯಲ್ಲಿ ತೊಡಗಿಸಿಕೊಂಡರೆ, ಯಶಸ್ಸು ಸಾಧ್ಯ ಎಂದು ಪ್ರೇರೇಪಣಾ ನುಡಿಗಳನ್ನಾಡಿದರು.
ಮುಖ್ಯಶಿಕ್ಷಕರಾದ ಶ್ರೀಮತಿ ಲತಾರವರು ಸ್ವಾಗತಿಸಿ, ಶಿಕ್ಷಕರಾದ ಟಿ.ಅಶೋಕ್ ರವರು ವಂದಿಸಿದರು. ವೇದಿಕೆಯಲ್ಲಿ ಶಿಕ್ಷಕರಾದ ಮಧುಸೂದನ್, ಮಹೇಶ್, ರವಿಚಂದ್ರ ಉಪಸ್ಥಿತರಿದ್ದರು.
- ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
- ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
- ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
- ಕೆನಡಾವನ್ನು ಅಮೆರಿಕಾದ 51ನೇ ರಾಜ್ಯವನ್ನಾಗಿ ಮಾಡಲು ಟ್ರಂಪ್ ಆರ್ಥಿಕ ಒತ್ತಡದ ಬೆದರಿಕೆ
- ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ
More Stories
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ