ಮುಂದಿನ ತಿಂಗಳು ನಿವೃತ್ತಿ ಹೊಂದಲಿರುವ ಮುಖ್ಯ ನ್ಯಾಯಮೂರ್ತಿ ಎಸ್.ಎ ಬೋಬ್ಡೆ ತಮ್ಮ ಉತ್ತರಾಧಿಕಾರಿಯಾಗಿ ನ್ಯಾ. ಎನ್.ವಿ ರಮಣ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ.
ಆಂಧ್ರಪ್ರದೇಶದ ಕೃಷಿ ಕುಟುಂಬದ ವರಾದ ರಮಣ 2000 ರಲ್ಲಿ ಆಂಧ್ರಪ್ರದೇಶ ಹೈಕೋರ್ಟ್ನ ಖಾಯಂ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಬಳಿಕ ದೆಹಲಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. 2014ರಲ್ಲಿ ಸುಪ್ರೀಂಕೋರ್ಟ್ ಜಡ್ಜ್ ಆಗಿ ನೇಮಕಗೊಂಡಿದ್ದರು.
ಬೋಬ್ಡೆ ಏಪ್ರಿಲ್ 23 ಕ್ಕೆ ನಿವೃತ್ತಿ:
ಮುಖ್ಯ ನ್ಯಾಯಾಧೀಶ ಬೋಬ್ಡೆ ಏಪ್ರಿಲ್ 23ಕ್ಕೆ ನಿವೃತ್ತಿ ಹೊಂದಲಿದ್ದಾರೆ. ಈ ಹಿನ್ನೆಲೆ ಕೇಂದ್ರ ಸರ್ಕಾರ ಕಳೆದ ವಾರ ಅವರಿಗೆ ಮುಂದಿನ ಸಿಜೆಐ ಸ್ಥಾನಕ್ಕೆ ಹೆಸರು ಶಿಫಾರಸು ಮಾಡುವಂತೆ ಕೇಳಿತ್ತು.
ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಕಳೆದ ಶುಕ್ರವಾರ ಬೋಬ್ಡೆ ಅವರಿಗೆ ಈ ಸಂಬಂಧ ಪತ್ರ ಬರೆದಿದ್ದರು.
ಪ್ರಸ್ತುತ ಬೋಬ್ಡೆ ನಂತರ ಸುಪ್ರೀಂಕೋರ್ಟ್ನಲ್ಲಿ ಅತ್ಯಂತ ಹಿರಿಯರಾಗಿರುವ ನ್ಯಾ. ಎನ್.ವಿ ರಮಣ. ಅವರಿಗೆ 2022 ಆಗಸ್ಟ್ 6ರವರೆಗೆ ಅಂದ್ರೆ ಒಂದು ವರ್ಷ 4 ತಿಂಗಳ ಕಾಲ ಸಿಜೆಐ ಆಗಿ ಸೇವೆ ಸಲ್ಲಿಸುವ ಅವಕಾಶವಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ