ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಲಾರಿ ಚಾಲಕ ಸಜೀವ ದಹನವಾಗಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75 ರ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ಕಳೆದ ರಾತ್ರಿ ಜರುಗಿದೆ.
ಮಂಗಳೂರಿನಿಂದ- ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್‍ಗೆ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದಿದೆ.
ಈ ಘಟನೆ ವೇಳೆ ಎರಡು ಗಾಡಿಗಳ ಮಧ್ಯೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ತೀವ್ರತೆಗೆ ಲಾರಿ ಚಾಲಕ ಸಜೀವ ದಹನವಾಗಿದ್ದಾರೆ.
ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ತಕ್ಷಣ ಬಸ್‍ನಿಂದ ಕೆಳಗಿಳಿದು ಓಡಿ ಹೋಗಿ ಅಪಾಯದಿಂದ ಪಾರಾಗಿದ್ದಾರೆ.
ಬಸ್ ಹಾಗೂ ಲಾರಿ ಎರಡು ಸುಟ್ಟು ಭಸ್ಮವಾಗಿದೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
- ಖಾಸಗಿ ವಾಹನಗಳಿಗೆ ಮಾಸಿಕ ಮತ್ತು ವಾರ್ಷಿಕ ಟೋಲ್ ಪಾಸ್ ಪರಿಚಯಿಸಲು ಸರ್ಕಾರ ತೀರ್ಮಾನ
- ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
- ವಿಚಿತ್ರ ಕಾಯಿಲೆಗೆ 15 ಜನರು ಬಲಿಪಡೆದ ಅನುಮಾನಾಸ್ಪದ ಘಟನೆ
- ಆಕಸ್ಮಿಕ ಗುಂಡು ಸಿಡಿದು ವ್ಯಕ್ತಿ ಸಾವು
- ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದಾಳಿ – ಆಸ್ಪತ್ರೆಯಲ್ಲಿ ಚಿಕಿತ್ಸೆ
More Stories
ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದಾಳಿ – ಆಸ್ಪತ್ರೆಯಲ್ಲಿ ಚಿಕಿತ್ಸೆ
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು