January 15, 2025

Newsnap Kannada

The World at your finger tips!

yediyurappa

ಸಿಎಂಗೆ ಮತ್ತೊಂದು ಸಂಕಷ್ಟ : ಆಪರೇಷನ್ ಕಮಲಕ್ಕೆ ಆಮಿಷ ಒಡ್ಡಿದ ಪ್ರಕರಣದ ತನಿಖೆಗೆ ಹೈಕೋರ್ಟ್ ಅಸ್ತು

Spread the love

ಸಿಎಂ ಬಿಎಸ್​ವೈಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಆಪರೇಷನ್ ಕಮಲಕ್ಕೆ ಆಮಿಷ ಒಡ್ಡಿದ ಪ್ರಕರಣದ ತನಿಖೆಗೆ ರಾಜ್ಯ ಹೈಕೋರ್ಟ್ ಅಸ್ತು ಎಂದಿದೆ.

ಆಪರೇಷನ್ ಕಮಲಕ್ಕಾಗಿ ಬಿ.ಎಸ್. ಯಡಿಯೂರಪ್ಪ ಆಮಿಷ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ ವೈ ವಿರುದ್ಧ ತನಿಖೆ ಹೈಕೋರ್ಟ್ ಮಾಡಲು‌
ಸೂಚಿಸಿದೆ.‌

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೆ ದೇವದುರ್ಗ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್​ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ.

ಪ್ರಕರಣ ರದ್ದು ಕೋರಿ ಬಿಎಸ್​ವೈ ಅರ್ಜಿ ಸಲ್ಲಿಸಿದ್ದರು. ಶಾಸಕ ನಾಗನಗೌಡ ಪುತ್ರ ಶರಣಗೌಡ ದೂರು ನೀಡಿ ಜೆಡಿಎಸ್ ಬಿಟ್ಟು ಬಿಜೆಪಿ ಸೇರಲು ಬಿಎಸ್ ವೈ, ಶಿವನಗೌಡ ನಾಯಕ್, ಪ್ರೀತಮ್ ಗೌಡ ಪತ್ರಕರ್ತ ಎಂ.ಬಿ.ಮರಮಕಲ್ ಆಮಿಷ ಒಡ್ಡಿದ್ದಾರೆ ಎಂದು ದೂರು ದಾಖಲಿಸಿದ್ದರು.

Copyright © All rights reserved Newsnap | Newsever by AF themes.
error: Content is protected !!