ಸ್ನೇಹಿತರೊಂದಿಗೆ ರಸ್ತೆ ಬದಿಯಲ್ಲಿ ನಿಂತು ಮಾತನಾಡುವ ವೇಳೆ ದುಷ್ಕರ್ಮಿಗಳು ಡ್ರಾಗರ್‌ನಿಂದ ಚುಚ್ಚಿ ವ್ಯಕ್ತಿಯ ಮೈ ಮೇಲೆ ಇದ್ದ ಚಿನ್ನಾಭರಣವನ್ನು ದೋಚಿಕೊಂಡು ಹೋಗಿರುವ ಘಟನೆ ಮಳವಳ್ಳಿ ತಾಲೂಕಿನ ದಳವಾಯಿಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ದಳವಾಯಿಕೋಡಿಹಳ್ಳಿ ಗ್ರಾಮದ ಮಧು (30) ರಸ್ತೆ ಬದಿಯಲ್ಲಿ ನಿಂತುಕೊಂಡು ತನ್ನ ಸ್ನೇಹಿತರೊಂದಿಗೆ ಮಾತನಾಡುವ ವೇಳೆ ಬೈಕ್‍ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಡ್ರಾಗರ್ ನಲ್ಲಿ ಹೊಟ್ಟೆಯ ಭಾಗಕ್ಕೆ ಚುಚ್ಚಿದ್ದಾರೆ.
ಈ ಘಟನೆ ಕಂಡ ಸ್ನೇಹಿತರು ಸಹ ಭಯದಿಂದ ಹಿಂದೆ ಸರಿದಿದ್ದಾರೆ. ದುಷ್ಕರ್ಮಿಗಳು ಮಧುವಿಗೆ ಚುಚ್ಚಿದ ಬಳಿಕ ಅವರ ಮೈ ಮೇಲೆ ಇದ್ದ ಚಿನ್ನಾಭರಣಗಳನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ.
ನಂತರ ರಕ್ತದ ಮಡುವಿನಲ್ಲಿ ಬಿದ್ದು ಹೊದ್ದಾಡುತ್ತಿದ್ದ ಮಧುವನ್ನು ಮಳವಳ್ಳಿಯ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯದಲ್ಲಿ ಮಧು ಸಾವನ್ನಪ್ಪಿದ್ದಾರೆ.
ಹಲಗೂರು ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಸುಮಲತಾ ಆಪ್ತ ಬೇಲೂರು ಸೋಮು ಕಾಂಗ್ರೆಸ್ ಗೆ ಸೇರ್ಪಡೆ
- ಪ್ರಥಮ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
- ಖಾಸಗಿ ವಾಹನಗಳಿಗೆ ಮಾಸಿಕ ಮತ್ತು ವಾರ್ಷಿಕ ಟೋಲ್ ಪಾಸ್ ಪರಿಚಯಿಸಲು ಸರ್ಕಾರ ತೀರ್ಮಾನ
- ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
- ವಿಚಿತ್ರ ಕಾಯಿಲೆಗೆ 15 ಜನರು ಬಲಿಪಡೆದ ಅನುಮಾನಾಸ್ಪದ ಘಟನೆ
More Stories
ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದಾಳಿ – ಆಸ್ಪತ್ರೆಯಲ್ಲಿ ಚಿಕಿತ್ಸೆ
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು