ಬೆಂಗಳೂರಿನಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ 6 ರಿಂದ 9ನೇ ತರಗತಿಗಳನ್ನು ಸ್ಥಗಿತಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
10ನೇ ತರಗತಿಗಳು ಎಂದಿನಂತೆ ಮುಂದುವರಿಯಲಿವೆ. ಆದರೆ, ವಿದ್ಯಾರ್ಥಿಗಳು ಶಾಲೆಗೆ ಬರುವುದು ಕಡ್ಡಾಯವಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದ ಉಳಿದೆಡೆ ಸದ್ಯ ಈಗ ಜಾರಿಯಲ್ಲಿರುವ ವ್ಯವಸ್ಥೆಯೇ ಮುಂದುವರೆಯಲಿದೆ. ಈ ನೂತನ ಆದೇಶ ಸದ್ಯ ಕೇವಲ ಬೆಂಗಳೂರು ನಗರ ವ್ಯಾಪ್ತಿಗೆ ಮಾತ್ರ ಒಳಪಡಲಿದೆ.
ಶಾಲೆಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ
ಬೆಂಗಳೂರಿನಲ್ಲಿ ಫೆಬ್ರವರಿ 22ರಿಂದ ಶಾಲೆಗಳು ಆರಂಭವಾಗಿದ್ದವು. 8ನೇ ತರಗತಿಗೆ ಭೌತಿಕ, 6 ಮತ್ತು 7ನೇ ತರಗತಿಗೆ ವಿದ್ಯಾಗಮ ತರಗತಿಗಳು ನಡೆಯುತ್ತಿದ್ದವು. ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳದಿಂದಾಗಿ 6ರಿಂದ 9ನೇ ತರಗತಿಗಳನ್ನು ಸಂಪೂರ್ಣ ಸ್ಥಗಿತಗೊಳಿಸುವುದಾಗಿ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ
ಕಡ್ಡಾಯ ಶಿಕ್ಷಣ ಕಾಯ್ದೆ ಅವಕಾಶಗಳಡಿಯಲ್ಲಿ ಶಾಲೆಗಳು ನಡೆಸಬೇಕಾದ ಮೌಲ್ಯಾಂಕನ ಪರೀಕ್ಷೆಗಳ ಕುರಿತು ಮುಂದಿನ ದಿನಗಳಲ್ಲಿ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 6ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರಿನ ಶಾಲೆಗಳಲ್ಲಿ ಹೆಚ್ಚುತ್ತಿದೆ ಸೋಂಕು:
ನಗರದಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಿಂದಾಗಿ ಕೆಲವು ಶಾಲೆಗಳನ್ನು ಬಂದ್ ಮಾಡಲಾಗಿದೆ. 10ಕ್ಕೂ ಹೆಚ್ಚು ಬಿಬಿಎಂಪಿ ಶಾಲೆಗಳು ತಾತ್ಕಾಲಿಕವಾಗಿ ಬಂದ್ ಆಗಿವೆ.
ಬಿಬಿಎಂಪಿ ಶಾಲೆಗಳ 90 ಕ್ಕೂ ಅಧಿಕ ಮಕ್ಕಳಿಗೆ ಸೋಂಕು ಖಚಿತವಾಗಿದೆ. ಹೀಗಾಗಿ ಸೋಂಕು ದೃಢಪಟ್ಟ ಕಾರಣ ತಾತ್ಕಾಲಿಕವಾಗಿ ಶಾಲೆಗಳು ಬಂದ್ ಮಾಡಲಾಗಿದೆ. ಬೆಂಗಳೂರಿನಲ್ಲಿ 10 ಕ್ಕೂ ಅಧಿಕ ಬಿಬಿಎಂಪಿ ಶಾಲೆಗಳು ತಾತ್ಕಾಲಿಕವಾಗಿ ಬಂದ್ ಆಗಿವೆ.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ