February 23, 2026

Newsnap Kannada

The World at your finger tips!

sachin

ಕೊರೋನಾ ಸೋಂಕು ಚಿಕಿತ್ಸೆಗೆ ಸಚ್ಚಿನ್ ಮುಂಬಯಿಯಲ್ಲಿ ಆಸ್ಪತ್ರೆಗೆ ದಾಖಲು

Spread the love

ಕಳೆದ ಎರಡು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ದೃಢಪಟ್ಟ ನಂತರ, ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಕೊರೋನಾ ಪಾಸಿಟಿವ್ ಬಂದ ನಂತರ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಈ ಕುರಿತಂತೆ ಟ್ವಿಟ್ ಮಾಡಿರುವ ಸಚಿನ್, ಇಂದು ವೈದ್ಯರ ಸಲಹೆಯ ಮೇರೆಗೆ ಕೊರೋನಾ ಸೋಂಕಿನ ಚಿಕಿತ್ಸೆಗಾಗಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

error: Content is protected !!