ಶಿವಮೊಗ್ಗ – ತುಮಕೂರು ಚತುಷ್ಪತ ರಸ್ತೆ ನಿರ್ಮಾಣಕ್ಕೆ ಕೇಂದ್ರ ಅಸ್ತು – ಯಡಿಯೂರಪ್ಪ ಹರ್ಷ

Team Newsnap
0 Min Read

ರಾಷ್ಟ್ರೀಯ ಹೆದ್ದಾರಿ 206 ರ ತುಮಕೂರು – ಶಿವಮೊಗ್ಗ ನಡುವೆ 4 ಪಥದ ರಸ್ತೆ ನಿರ್ಮಾಣಕ್ಕೆ ಕೇಂದ್ರ ಅಸ್ತು ಎಂದಿದೆ.

ಭಾರತ್ ಮಾಲಾ ಪರಿಯೋಜನಾ ಅಡಿಯಲ್ಲಿ 4 ವಿಭಾಗಗಳ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.‌

6397.47 ಕೋಟಿ ರೂ. ವೆಚ್ಚದ ಈ ಯೋಜನೆಯಿಂದ ಬೆಂಗಳೂರಿನಿಂದ ಮಲೆನಾಡು ಭಾಗದ ಸಂಪರ್ಕ ಇನ್ನಷ್ಟು ಸುಗಮವಾಗಲಿದೆ.

ಈ ಯೋಜನೆಗೆ ಅನುಮೋದನೆ ನೀಡಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ.

Share This Article
Leave a comment