February 22, 2026

Newsnap Kannada

The World at your finger tips!

pabji

ಪಬ್ಜಿ ಆಟದ ಹುಚ್ಚು : ಬಾಲಕನ ಹತ್ಯೆ ಮಾಡಿದ 17 ರ ಪೋರ

Spread the love

ಪಬ್ ಜೀ ಆಟ ಮತ್ತೊಂದು ರೂಪದಲ್ಲಿ ಮೊಬೈಲ್‍ಗೆ ಬಂದಿದೆ. ಆ ಆಟ ಈಗ ಜೀವ ತೆಗೆಯುವ ಹಂತಕ್ಕೆ ಬಂದಿದೆ ಮಂಗಳೂರಿನಲ್ಲಿ ಬಾಲಕನ ಜೀವ ಪಬ್ ಜೀ ಆಟದಲ್ಲಿ ಅಂತ್ಯವಾಗಿದೆ.

ಆಕೀಫ್(12) ಬರ್ಬರವಾಗಿ ಹತ್ಯೇಗೀಡಾದ ಬಾಲಕ. ಈತ ಮಂಗಳೂರು ನಗರ ಹೊರವಲಯದ ಕೆ.ಸಿ ರೋಡ್ ನಿವಾಸಿ.

ಪ್ರಸ್ತುತ ಕೆ.ಸಿ.ರೋಡ್‍ನ ಫಲಹಾ ಇಂಗ್ಲಿಷ್ ಮೀಡಿಯಾಂ ಶಾಲೆಯ 7 ತರಗತಿ ವಿದ್ಯಾರ್ಥಿಯಾಗಿದ್ದನು. ನಿನ್ನೆ ರಾತ್ರಿ 9 ಗಂಟೆಗೆ ಮನೆಯಿಂದ ಹೊರಟವನು ಇಂದು ಬೆಳಗ್ಗೆ ಕೊಲೆಯಾದ ಸ್ಥಿತಿಯಲ್ಲಿ ಮೈದಾನದಲ್ಲಿ ಪತ್ತೆಯಾಗಿದ್ದಾನೆ.

ಬಳಿಕ ರಾತ್ರಿ 9 ಗಂಟೆಗೆ ಇಬ್ಬರೂ ಮೈದಾನದಲ್ಲಿ ಪಬ್ ಜೀ ಆಡಿದ್ದಾರೆ. ಈ ವೇಳೆ ಆಟದಲ್ಲಿ ಬಾಲಕ ಸೋತಿದ್ದಾನೆ. ಇದರಿಂದ ಇಬ್ಬರ ನಡುವೆಯೂ ಗಲಾಟೆಯಾಗಿದೆ. ಗಲಾಟೆ ಮಧ್ಯೆ ಬಾಲಕ ಆಕೀಫ್‍ಗೆ ದೊಡ್ಡ ಕಲ್ಲಿನಲ್ಲಿ ಹೊಡೆದ್ದಾನೆ. ಆಕೀಫ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದರಿಂದ ಗಾಬರಿಗೊಂಡ ಬಾಲಕ, ಆಕೀಫ್ ಶವವನ್ನು ಮೈದಾನದ ಪೊದೆಯಲ್ಲಿ ಬಚ್ಚಿಟ್ಟು ಪರಾರಿಯಾಗಿದ್ದಾನೆ.

ಬೆಳಗ್ಗಿನ ವೇಳೆ ಆಕೀಫ್ ಮೃತದೇಹ ಮೈದಾನದ ಪೊದೆಯಲ್ಲಿ ಕಂಡುಬಂದಿದೆ. ಬಾಲಕನ ವಿಚಾರಣೆ ವೇಳೆ ಎಲ್ಲವನ್ನೂ ಬಾಯಿಬಿಟ್ಟಿದ್ದಾನೆ ಎಂದು ಪೋಲಿಸರು ತಿಳಿಸಿದ್ದಾರೆ.

error: Content is protected !!