6 ನೇ ವೇತನ ಜಾರಿಗೆ ಆಗ್ರಹಿಸಿ ಏಪ್ರಿಲ್ 7 ರಂದು ಸಾರಿಗೆ ಬಂದ್ ಗೆ ಕರೆ ನೀಡಿದ್ದಾರೆ.
ಆ ದಿನ ರಾಜ್ಯಾದ್ಯಂತ ಬಸ್ ಗಳ ಸಂಚಾರ ಬರುವುದಿಲ್ಲ ಎಂದು ಸಾರಿಗೆ ನೌಕರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನೌಕರರಿಗೆ ಸವಾಲು ಸ್ವೀಕರಿಸಿದ ಸಾರಿಗೆ ಸಚಿವರು, ಖಾಸಗಿ ವಾಹನಗಳನ್ನು ಸಂಚಾರಕ್ಕೆ ಬಳಕೆ ಮಾಡುವ ನಿರ್ಧಾರ ಮಾಡಿದ್ದಾರೆ.
ಸಾರಿಗೆ ನೌಕರರ ಪ್ರತಿಭಟನೆಗೆ ಒಂದು ದಿನವಷ್ಟೇ ಬಾಕಿ ಉಳಿದಿದೆ, ಈ ವಿಚಾರವಾಗಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸುದ್ದಿಗೋಷ್ಟಿ ನಡೆಸಿ, ವೇತನ ಹೆಚ್ಚಳ ಮಾಡಲು ನೀತಿ ಸಂಹಿತೆ ಅಡ್ಡಿಯಿದೆ. ನೀತಿ ಸಂಹಿತೆ ಮುಗಿದ ಬಳಿಕ ವೇತನ ಹೆಚ್ಚಳ ಮಾಡುವ ಖಾತ್ರಿ ಕೊಡುತ್ತೇವೆ. ಚುನಾವಣಾ ಆಯೋಗ ಅದಕ್ಕೂ ಮುನ್ನ ಅನುಮತಿ ನೀಡಿದರೆ ಚರ್ಚಿಸಿ ಘೋಷಣೆ ಮಾಡ್ತೇವೆ. ಖಾಸಗಿ ಬಸ್ ನವರಿಗೆ ಸ್ಪಂದಿಸುವಂತೆ ಆಹ್ವಾನ ಕೊಟ್ಟಿದ್ದೇವೆ. ಮಿನಿ ಬಸ್, ಟೆಂಪೋ ಟ್ರಾವೆಲರ್ ಗಳನ್ನೂ ಬಳಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಇಂದು ಟ್ಯಾಕ್ಸಿ, ಮಿನಿ ಕ್ಯಾಬ್ ಮತ್ತು ಬಸ್ ಮಾಲೀಕರೊಂದಿಗೆ ಸಾರಿಗೆ ಸಚಿವರು ಚರ್ಚಿಸಿ ಸಭೆ ನಡೆಸಿದ್ದಾರೆ. ಈ ಹಿಂದೆ ಖಾಸಗಿ ವಾಹನಗಳ ಮಾಲೀಕರು ಸರ್ಕಾರದ ಮುಂದೆ ಇಟ್ಟಿದ್ದ ಆರು ಬೇಡಿಕೆಗಳನ್ನು ಈಡೇರಿಸುವ ಜೊತಗೆ ಒಂದು ತಿಂಗಳ ತೆರಿಗೆ ರದ್ದು ಮಾಡುವುದಾಗಿ ಭರವಸೆ ನೀಡಿದ್ದು, ಖಾಸಗಿ ವಾಹನಗಳನ್ನ ರಸ್ತೆಗೆ ಇಳಿಸುವಂತೆ ತಿಳಿಸಲಾಗಿದೆ. ಇದಕ್ಕೆ ಖಾಸಗಿ ವಾಹನಗಳ ಮಾಲೀಕರು ಒಪ್ಪಿಕೊಂಡಿದ್ದು ಮುಷ್ಕರದ ದಿನ ವಾಹನಗಳನ್ನು ರಸ್ತೆಗೆ ಇಳಿಸುವುದಾಗಿ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ