ಬಾಲಿವುಡ್ ನಟಿ ಕತ್ರಿನಾ ಕೈಫ್ ಗೆ ಮಹಾಮಾರಿ ಕೋವಿಡ್ ಸೋಂಕು ದೃಢವಾಗಿದೆ.
ಸ್ವತಃ ಕತ್ರಿನಾ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ನನಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ತಕ್ಷಣವೆ ಐಸೋಲೇಶನ್ ಹಾಗೂ ಹೋಮ್ ಕ್ವಾರೆಂಟೈನ್‍ಗೆ ಒಳಗಾಗಿದ್ದೇನೆ. ವೈದ್ಯರ ಸಲಹೆಯಂತೆ ಎಲ್ಲ ಮುನ್ನೆಚ್ಚರಿಕೆಯ ಕ್ರಮಗಳನ್ನು ಪಾಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದ ಎಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿರುವ ಕತ್ರಿನಾ, ನಿಮ್ಮ ಪ್ರೀತಿ ಹಾಗೂ ಬೆಂಬಲಕ್ಕೆ ನಾನು ಚಿರಋಣಿ, ಎಲ್ಲರೂ ಸುರಕ್ಷಿತವಾಗಿ ಮನೆಯಲ್ಲಿ ಇರಿ ಎಂದು ಮನವಿ ಮಾಡಿದ್ದಾರೆ.
ಬಾಲಿವುಡ್ ನಟ ಅಕ್ಷಯ್ ಕುಮಾರ್, ಆಮೀರ್ ಖಾನ್, ಗೋವಿಂದ್, ಆರ್ ಮಾಧವನ್, ನಟಿ ಆಲಿಯಾ ಭಟ್, ಗಾಯಕ ಆದಿತ್ಯಾ ನಾರಾಯಣ್ ಅವರಲ್ಲೂ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.
ಮಂಗಳವಾರ ಬೆಳಿಗ್ಗೆ ಕುನಾಲ್ ಕಮ್ರಾ ಅವರಿಗೂ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದೆ. ಸೋಮವಾರ ಬಾಲಿವುಡ್ ನಟ ವಿಕ್ಕಿ ಕೌಶಾಲ್ ಹಾಗೂ ನಟಿ ಭೂಮಿ ಪಡ್ನೆಕರ್ ಅವರಿಗೂ ಕೂಡ ಕೋವಿಡ್ ಸೋಂಕು ದೃಢಪಟ್ಟಿದೆ.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ