February 22, 2026

Newsnap Kannada

The World at your finger tips!

modi1

ಕೋವಿಡ್‍ನ 2ನೇ ಡೋಸ್ ಲಸಿಕೆ ಪಡೆದ ಪ್ರಧಾನಿ ಮೋದಿ

Spread the love

ದೇಶಾದ್ಯಂತ ಮಹಾಮಾರಿ ಕೊರೋನಾ ವೈರಸ್ ತಡೆಗೆ ಸಾಕಷ್ಟು ಪ್ರಯತ್ನ ನಡೆದಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಎರಡನೇ ಡೋಸ್ ಲಸಿಕೆಯನ್ನು ಗುರುವಾರ ಹಾಕಿಸಿಕೊಂಡರು.

2ನೇ ಡೋಸ್ ಲಸಿಕೆ ಹಾಕಿಸಿಕೊಂಡ ಪ್ರಧಾನಿ, ಯಾರೆಲ್ಲ ಲಸಿಕೆ ಪಡೆದುಕೊಳ್ಳಲಿ ಅವರೆಲ್ಲರೂ ಲಸಿಕೆ ಪಡೆದುಕೊಳ್ಳಿ ಎಂದು ಕರೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಮೋದಿ, ಇಂದು ಏಮ್ಸ್ ಆಸ್ಪತ್ರೆಯಲ್ಲಿ ಎರಡನೇ ಡೋಸ್ ಕೊರೊನಾ ಲಸಿಕೆಯನ್ನು ಪಡೆದುಕೊಂಡಿದ್ದೇನೆ. ನಮ್ಮಲ್ಲಿರುವ ಕೆಲ ವಿಧಾನಗಳಲ್ಲಿ ಸದ್ಯ ಲಸಿಕೆ ಪಡೆದುಕೊಳ್ಳುವುದೇ ಕೊರೋನಾ ಬರದಂತೆ ತಡೆಗಟ್ಟಲು ಇರುವ ಮಾರ್ಗವಾಗಿದೆ ಎಂದಿದ್ದಾರೆ.
ಯಾರೆಲ್ಲ ಲಸಿಕೆ ಪಡೆದುಕೊಳ್ಳಲು ಅರ್ಹರಿದ್ದೀರೋ ಅವರೆಲ್ಲರೂ ಶೀಘ್ರವೇ ಲಸಿಕೆ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

error: Content is protected !!