ಮೈಸೂರಿಗೆ ಬರುವ ಪ್ರವಾಸಿಗರಿಗೆ ನೆಗೆಟಿವ್ ವರದಿ ಕಡ್ಡಾಯ – ಡಿಸಿ ರೋಹಿಣಿ

Team Newsnap
1 Min Read
Rohini Sindhuri's husband Sudhir grab land in Yalahanka? Complaint via tweet to DGP ರೋಹಿಣಿ ಸಿಂಧೂರಿ ಪತಿ ಸುಧೀರ್ ಯಲಹಂಕದಲ್ಲಿ ಭೂ ಕಬಳಿಕೆ ? ಡಿಜಿಪಿಗೆ ಟ್ವೀಟ್ ಮೂಲಕ ದೂರು

ಮೈಸೂರು ಪ್ರವಾಸಿ ತಾಣಗಳಿಗೆ ಬರುವ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ತೋರಿಸುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಾಕೀತು ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿ ರೋಹಿಣಿ ಜಿಲ್ಲೆಯಲ್ಲಿ ಕೆಲದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. , ಈ ನಿಟ್ಟಿನಲ್ಲಿ ಏಪ್ರಿಲ್ 10 ರಿಂದ ಕೆಲವು ಕಠಿಣ ಮಾರ್ಗಗಳನ್ನು ಅನುಸರಿಸುವುದು ಅನಿವಾರ್ಯ ಎಂದರು

ಏಪ್ರಿಲ್ 10 ರಿಂದ ಏಪ್ರಿಲ್ 20 ರವರೆಗೆ ಹಲವು ರಜೆಗಳು ಇವೆ. ಮೈಸೂರಿಗೆ ಸಾಕಷ್ಟು ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದೆ. ಈ ವೇಳೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಆತಂಕವಿದೆ. ಹಾಗಾಗಿ ಮೈಸೂರಲ್ಲಿ ಕೆಲವು ಟಫ್ ರೂಲ್ಸ್ ಗಳನ್ನು ಜಾರಿಗೆ ತರಲು ಮುಂದಾಗಿದ್ದೇವೆ ಎಂದರು.

ಜಿಲ್ಲಾಡಳಿತ ನಿರ್ಧಾರ ದಂತೆ ಏಪ್ರಿಲ್ 10 ರಿಂದ ಏಪ್ರಿಲ್ 20ರ ವರೆಗೆ ಜಿಲ್ಲೆಯಲ್ಲಿ ರುವ ಪ್ರವಾಸಿ ತಾಣಗಳಿಗೆ ಹೋಗಲು, ಚಿತ್ರಮಂದಿರಗಳಿಗೆ ತೆರಳಲು ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ ಎಂದರು.

ಮೈಸೂರಿನಲ್ಲಿರುವ ಯಾವುದೇ ಪ್ರವಾಸಿತಾಣಗಳನ್ನು ಮುಚ್ಚುವುದಿಲ್ಲ ಬದಲಾಗಿ ಕೆಲವು ನಿಯಮಗಳನ್ನು ಜಾರಿಗೆ ತಂದಿದ್ದೇವೆ. ರಜೆಯ ಇರುವುದರಿಂದಾಗಿ ಪ್ರವಾಸಿಗರು ಬರುವ ನಿರೀಕ್ಷೆ ಇದ್ದು ಈ ಸಂದರ್ಬದಲ್ಲಿ ಜನ ಸಂದಣಿ ಜಾಸ್ತಿ ಇರುವ ಪ್ರದೇಶಗಳಲ್ಲಿ ನಿಗಾ ವಹಿಸಲಾಗುವುದು, ಈ ಎಲ್ಲಾ ಕಾರ್ಯಗಳಿಗಾಗಿ ಈಗಾಗಲೇ ಜಿಲ್ಲೆಯಲ್ಲಿ 300 ಹೋಂ ಗಾರ್ಡ್‍ಗಳನ್ನು ನೇಮಕ ಮಾಡಿದ್ದೇವೆ. ಮೈಸೂರಿಗೆ ಪ್ರವಾಸಕ್ಕೆ ಬರುವವರು ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ತರಬೇಕೆಂದು ಪ್ರವಾಸಿಗರಿಗೆ ಮನವಿ ಮಾಡಿಕೊಂಡರು.

Share This Article
Leave a comment