ಪ್ರಸಕ್ತ ನಡೆಯುತ್ತಿರುವ ಪರೀಕ್ಷೆ ಅಂತ್ಯವಾದ ನಂತರ ಬೇಸಿಗೆ ರಜೆ ನೀಡದೇ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುತ್ತವೆ. ನಿಗದಿತ ವೇಳಾಪಟ್ಟಿಯಂತೆ ಎಲ್ಲವೂ ಮುಂದುವರಿಯುತ್ತವೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಶನಿವಾರ ಹೇಳಿದರು.
ಬೆಂಗಳೂರಿನಲ್ಲಿ ಸಂಸ್ಕೃತ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ ಡಿಸಿಎಂ ಅಶ್ವತ್ಥ್ ನಾರಾಯಣ, ವಿಶ್ವವಿದ್ಯಾಲಯದ ಮಟ್ಟದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್, ಡಿಪ್ಲೋಮೋ ಸೇರಿದಂತೆ ಉನ್ನತ ಶಿಕ್ಷಣ ವ್ಯಾಪ್ತಿಗೆ ಬರುವ ಯಾವುದೇ ವಿಭಾಗದ ಪರೀಕ್ಷೆಗಳು ಯಥಾವತ್ ನಡೆಯುತ್ತವೆ. ಯಾವ ಬದಲಾವಣೆಯೂ ಇರುವುದಿಲ್ಲ ಎಂದರು.
ಮುಂದಿನ ಶೈಕ್ಷಣಿಕ ವರ್ಷ ಆರಂಭ
ಮುಂದಿನ ವರ್ಷ, ಅಂದರೆ; 2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಯಾವ ಚಟುವಟಿಕೆಗಳಲ್ಲೂ ವ್ಯತ್ಯಯ ಆಗುವುದಿಲ್ಲ.
ಈಗ ಪರೀಕ್ಷೆಗಳು ಮುಗಿದ ನಂತರ ಬೇಸಿಗೆ ರಜೆಗಳು ಇರುವುದಿಲ್ಲ. ಹಿಂದೆಯೇ ತರಗತಿಗಳು ಆರಂಭವಾಗುತ್ತವೆ. ಅದರಲ್ಲಿ ಆಫ್‌ಲೈನ್ ಮತ್ತು ಆನ್‌ಲೈನ್ ತರಗತಿಗಳು ಇರುತ್ತವೆ. ಮೊದಲು ಆನ್‌ಲೈನ್ ತರಗತಿಗಳು ಆರಂಭವಾಗುತ್ತವೆ. ವಿದ್ಯಾರ್ಥಿಗಳು ಎರಡರ ಪೈಕಿ ಒಂದಕ್ಕೆ ಕಡ್ಡಾಯವಾಗಿ ಹಾಜರಾಗಬೇಕಾಗುತ್ತದೆ ಎಂದರು.
ಕಳೆದ ವರ್ಷ 1.10 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟ್ಯಾಪ್ ಕೊಡಲಾಗಿತ್ತು. ಕ್ಲಾಸ್ ರೂಮುಗಳನ್ನೇ ಸ್ಟುಡಿಯೋಗಳ್ನಾಗಿ ಪರಿವರ್ತಿಸಲಾಗಿದೆ. ಎಲ್ಲವೂ ಸ್ಮಾರ್ಟ್ ಕ್ಲಾಸ್ ರೂಮುಗಳಾಗಿವೆ. ಮನೆಯಿಂದಲೇ ವ್ಯಾಸಂಗವನ್ನು ಮುಂದುವರಿಸಬಹುದು ಎಂದು ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.
ಈಗಾಗಲೇ ಮುಂದಿನ ಶೈಕ್ಷಣಿಕ ವರ್ಷದ ನಾಲ್ಕೈದು ತಿಂಗಳು ನಷ್ಟವಾಗಿದೆ. ಅಂದರೆ, ತಡವಾಗಿದೆ. ಇನ್ನೂ ತಡ ಆಗುವುದು ಬೇಡ. ಒಂದು ವೇಳೆ ತಡವಾದರೆ, ಓದು, ಪರೀಕ್ಷೆ, ತೇರ್ಗಡೆ, ಉದ್ಯೋಗ, ಮುಂದಿನ ವ್ಯಾಸಂಗದ ಚೈನ್ ಕಟ್ ಆಗಿಬಿಡುತ್ತದೆ. ಹಾಗೆ ಆಗುವುದು ಬೇಡ ಎಂದರು.
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
- ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ
- ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ
- ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
- ಚನ್ನಪಟ್ಟಣ ನಗರಸಭೆ ಆಯುಕ್ತ ನಾಗೇಶ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ
More Stories
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ
ಮೈಸೂರಿನ ಸರ್ಕಾರಿ ಶಾಲೆಯ ಜಾಗ ವಕ್ಫ್ ಆಸ್ತಿಯಾಯ್ತು – ಸಿಎಂಗೆ ಪ್ರತಾಪ್ ಸಿಂಹ ಟಾಂಗ್