ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದಿಲ್ಲ : 12ನೇ ತರಗತಿಯ ಪರೀಕ್ಷೆ ಮುಂದೂಡಿಕೆಯೂ ಇಲ್ಲ – ಶಿಕ್ಷಣ ಸಚಿವ

Team Newsnap
1 Min Read

ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದು ಪಡಿಸುವ ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡುವ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

suresh ex

ಈ ಕುರಿತಂತೆ ಟ್ವೀಟ್ ಮಾಡಿರುವ ಸಚಿವರು ಸಿಬಿಎಸ್‌ಇ ರೀತಿಯಲ್ಲಿ ರಾಜ್ಯದಲ್ಲಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದುಪಡಿಸಲಾಗುವ ಬಗ್ಗೆ ಯಾವುದೇ ಪ್ರಸ್ತಾವನೆ ಸಧ್ಯಕ್ಕೆ ಇಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜೂನ್‌ 21ರಿಂದ ಆರಂಭಿಸಲು ಸರ್ಕಾರ ಈಗಾಗಲೇ ನಿರ್ಧರಿಸಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ, ಪರೀಕ್ಷೆಗಳನ್ನು ನಡೆಸುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದಲ್ಲೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ರದ್ದಾಗುತ್ತವೆ ಎಂದು ಹಬ್ಬಿರುವ ಊಹಾಪೋಹಗಳಿಗೆ ಶಿಕ್ಷಣ ಸಚಿವರು ತೆರೆ ಎಳೆದಿದ್ದಾರೆ.

Share This Article
Leave a comment