February 23, 2026

Newsnap Kannada

The World at your finger tips!

YADIYURAPPA1

ಸಿಎಂ ಯಡಿಯೂರಪ್ಪಗೆ ಮತ್ತೆ ಕೊರೊನಾ – ಮಣಿಪಾಲ್ ಆಸ್ಪತ್ರೆಗೆ ಶಿಷ್ಟ್

Spread the love

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ.

ಶುಕ್ರವಾರ ಬೆಳಗ್ಗೆ ತುರ್ತು ಸಭೆಯ ಬಳಿಕ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿ ಟೆಸ್ಟ್ ಮಾಡಿಸಿದ ವೇಳೆ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ.

ಈ ಹಿಂದೆ ಸಿಎಂ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಗುಣಮುಖರಾಗಿದ್ದರು. ಈ ಹಿನ್ನೆಲೆಯಲ್ಲಿ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾದಾಗ ಮತ್ತೆ ಟೆಸ್ಟ್ ಮಾಡಿಸಿದ್ದು, ಅದರಲ್ಲಿ ನೆಗೆಟಿವ್ ಬಂದಿತ್ತು.

ಇದೀಗ ಮತ್ತೆ ಇಂದು ಆರೋಗ್ಯ ಕೈಕೊಟ್ಟ ಹಿನ್ನೆಲೆಯಲ್ಲಿ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿದೆ. ರಾಮಯ್ಯ ಆಸ್ಪತ್ರೆ ಯಿಂದ ಮಣಿಪಾಲ್ ಆಸ್ಪತ್ರೆಗೆ ಮುಖ್ಯ ಮಂತ್ರಿ ಗಳನ್ನು ಶಿಪ್ಟ್ ಮಾಡಲಾಗಿದೆ.‌

ಮುಖ್ಯ ಮಂತ್ರಿಗಳ‌ ಸಂಪರ್ಕಕ್ಕೆ ಬಂದ ಸಚಿವರು, ಅಧಿಕಾರಿಗಳು ಕೊರೋನಾ ಟೆಸ್ಟ್ ಮಾಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಕೋರಿದ್ದಾರೆ.‌

error: Content is protected !!