November 27, 2024

Newsnap Kannada

The World at your finger tips!

vote , election , Tripura

ರಾಜ್ಯದ ಬೆಳಗಾವಿ, ಬಸವಕಲ್ಯಾಣ, ಮಸ್ಕಿ ಕ್ಷೇತ್ರಗಳ ಮತದಾನ ಆರಂಭ‌

Spread the love

ಕೊರೋನಾ ಸೋಂಕಿನ ಭೀತಿಯ ನಡುವೆಯೂ ರಾಜ್ಯದಲ್ಲಿನ ಮೂರು ಕ್ಷೇತ್ರದ ಉಪಚುನಾವಣೆಗೆ ಶನಿವಾರ ಬೆಳಿಗ್ಗೆ ಯಿಂದ ಮತದಾನ ಆರಂಭವಾಗಿದೆ.

ನಿನ್ನೆ ಬಹಿರಂಗ ಪ್ರಚಾರ ಅಂತ್ಯ ಹಿನ್ನೆಲೆ ಅಭ್ಯರ್ಥಿಗಳ ಪರ ಗುರುವಾರ ಮನೆ ಮನೆಗಳಿಗೆ ತೆರಳಿಗೆ ರಾಜಕೀಯ ನಾಯಕರು ಅದ್ಧೂರಿ ಪ್ರಚಾರ ನಡೆಸಿದ್ದರು.

ಬೆಳಗಾವಿ ಲೋಕಸಭಾ ಕ್ಷೇತ್ರ:

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೂ ಮತದಾನ ಆರಂಭಗೊಂಡಿದೆ, 18,07,250 ಮತದಾರರನ್ನು ಕ್ಷೇತ್ರ ಹೊಂದಿದೆ.
ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಒಟ್ಟು 2,566 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಬಿಜೆಪಿಯ ಮಂಗಳಾ ಅಂಗಡಿ, ಕಾಂಗ್ರೆಸ್‍ನ ಸತೀಶ್ ಜಾರಕಿಹೊಳಿ ಮಧ್ಯೆ ಫೈಟ್ ಜೋರಾಗಿದೆ. 118 ಸೂಕ್ಷ್ಮ, 587 ಅತೀ ಸೂಕ್ಷ ಮತಗಟ್ಟೆ ಸ್ಥಾಪನೆ ಮಾಡಲಾಗಿದ್ದು, 3,500 ಪೊಲೀಸರರನ್ನು ನಿಯೋಜಿಸಲಾಗಿದೆ.

ಮಸ್ಕಿ ವಿಧಾನ ಸಭಾ ಕ್ಷೇತ್ರ:

ಮಸ್ಕಿ ಕ್ಷೇತ್ರದಲ್ಲಿ ಒಟ್ಟು 305 ಮತಗಟ್ಟೆಯಲ್ಲಿ ಮತದಾನ ನಡೆಯಲಿದೆ. ಬೀದರ್ ನ ಬಸವಕಲ್ಯಾಣದಲ್ಲಿ 326 ಮತಗಟ್ಟೆಗಳು ಸಜ್ಜಾಗಿವೆ.

ಮಸ್ಕಿಯಲ್ಲಿ ಬಿಜೆಪಿಯ ಪ್ರತಾಪಗೌಡ ಪಾಟೀಲ್, ಕಾಂಗ್ರೆಸ್‍ನ ಬಸನಗೌಡ ತುರವಿಹಾಳ ಮಧ್ಯೆ ಬಿಗ್ ಫೈಟ್ ಇದೆ. 2,05,429 ಮತದಾರರು ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಬಸವ ಕಲ್ಯಾಣದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಕಾಂಗ್ರೆಸ್‍ನ ಮಾಲಾ ಬಿ.ನಾರಾಯಣರಾವ್, ಬಿಜೆಪಿಯ ಶರಣು ಸಲಗಾರ ಮತ್ತು ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಸೇರಿದಂತೆ 12 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. 2,39,782 ಮತದಾರು 12 ಅಭ್ಯರ್ಥಿಗಳ ಹಣೆ ಬರಹ ನಿರ್ಧರಿಸಲಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!