ರಾಜ್ಯದಲ್ಲಿ 1 ರಿಂದ 9ನೇ ತರಗತಿ ಪರೀಕ್ಷೆ ರದ್ದು – ಪರೀಕ್ಷೆ ಇಲ್ಲದೇ ಎಲ್ಲರೂ ಪಾಸ್

Team Newsnap
1 Min Read
no extra fee to be collected for NEET JEE IIT exams

ರಾಜ್ಯದಲ್ಲಿ ಕೊರೋನಾ ಹೆಚ್ಚಾಗುತ್ತಿ ರುವ. ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿ ಪರೀಕ್ಷೆ ರದ್ದು ಮಾಡಿರುವ ಸರ್ಕಾರ, ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ನಿರ್ಧರಿಸಿದೆ.

ಏಪ್ರಿಲ್ 30 ರೊಳಗೆ ಶಿಕ್ಷಕರು ವಿದ್ಯಾರ್ಥಿಗಳಿಗೆ ವಿಶ್ಲೇಷಣಾ‌ ಮೌಲ್ಯಾಂಕ ನೀಡಬೇಕು. ನಂತರ ವಿದ್ಯಾರ್ಥಿಗಳನ್ನು ಪಾಸು ಮಾಡಲಾಗುವುದು.

ಸಾರ್ವಜನಿಕ ಶಿಕ್ಷಣ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ನಡುವೆ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಸೋಂಕು ತಗುಲುವು ಭೀತಿ ಹೆಚ್ಚಿದೆ. ತಜ್ಞರು ಕೂಡ ಇದನ್ನೇ ಅಭಿಪ್ರಾಯ ಪಟ್ಟಿದ್ದಾರೆ.

ಈ‌ ಕಾರಣಕ್ಕಾಗಿ ರಾಜ್ಯದಲ್ಲಿನ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಈ ವರ್ಷ ಪಾಸ್ ಮಾಡಲಾಗುತ್ತಿದೆ ಆದೇಶ ಹೇಳಿದೆ.

Share This Article
Leave a comment