ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9 ರಿಂದ ಶುಕ್ರವಾರ ಬೆಳಿಗ್ಗೆ 6 ಗಂಟೆಯವರೆಗೆ ರಾತ್ರಿ ಕರ್ಪ್ಯೂ ಹಾಗೂ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದೆ.
ಹೊಸ ಮಾರ್ಗಸೂಚಿಯಂತೆ 14 ದಿನಗಳ ವರೆಗೆ ರಾಜ್ಯದಲ್ಲಿ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಏಪ್ರಿಲ್ 21 ರಿಂದ ಮೇ4 ರವರೆಗೆ ಕಠಿಣ ಕ್ರಮ :
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಈ ಕುರಿತಂತೆ ವಿವರ ನೀಡಿ, ಏಪ್ರಿಲ್ 21( ನಾಳೆಯಿಂದ) ಮೇ.4ರವರೆಗೆ ಜಾರಿಗೆ ಬರುವಂತೆ 14 ದಿನಗಳ ಕಾಲ ರಾಜ್ಯಾಧ್ಯಂತ ಸೋಮವಾರದಿಂದ ರಾತ್ರಿ 9 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾತ್ರಿ ಕರ್ಪ್ಯೂ, ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸ ಲಾಗಿದೆ.
- ಬಾರ್ ಮತ್ತು ರೆಸ್ಟೋರೆಂಟ್ ಬಂದ್ ಮಾಡಲಾಗಿದೆ. ಆದರೆ ಪಾರ್ಸಲ್ ಗೆ ಅವಕಾಶವಿದೆ.
- ಮದುವೆಗೆ 50 ಜನರಿಗೆ, ಅಂತ್ಯಕ್ರಿಯೆಗೆ 20 ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ.
- ಇ ಕಾಮರ್ಸ್ ಚಟುವಟಿಕೆಗೆ ಅವಕಾಶ ನೀಡಲಾಗಿದೆ.
- ಸಿನಿಮಾ ಹಾಲ್, ಸ್ವಿಮ್ಮಿಂಗ್ ಫೂಲ್, ಮಾರ್ಕೆಟ್ ಬಂದ್ ಮಾಡಲಾಗುತ್ತಿದೆ.
- ಶಾಲಾ-ಕಾಲೇಜು ಮುಚ್ಚಲಾಗುತ್ತಿದೆ.
- ರಾತ್ರಿ ಪಾಳಿಯಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡೋದಕ್ಕೆ ಅವಕಾಶ.
- ರಾತ್ರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬಸ್ ನಲ್ಲಿ ತೆರಳೋರು ಟಿಕೆಟ್ ತೋರಿಸಿ ಸಾಗಬೇಕು.
- ರಾಜ್ಯಾಧ್ಯಂತ ಧಾರ್ಮಿಕ ಕ್ಷೇತ್ರಗಳು ಬಂದ್ ಮಾಡಲಾಗುತ್ತಿದೆ. ಭಕ್ತರಿಗೆ ಅವಕಾಶವಿಲ್ಲ.
- ಸಲೂನ್, ಬ್ಯೂಟಿ ಪಾರ್ಲರ್ ಗೆ ಅವಕಾಶ ನೀಡಲಾಗಿದೆ.
- ಸರ್ಕಾರಿ ಕಚೇರಿಯಲ್ಲಿ ಶೇ.50ರಷ್ಟು ಜನರಿಗೆ ಕೆಲಸ ಮಾಡೋದಕ್ಕೆ ಅವಕಾಶ.
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ