ರಾಜ್ಯ ಉಚ್ಚ ನ್ಯಾಯಾಲಯದ ಸೂಚನೆ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರವನ್ನು ಇಂದು ತಾತ್ಕಾಲಿಕವಾಗಿ ಅಂತ್ಯಗೊಳಿಸುತ್ತಿದ್ದೇವೆ. ನಾಳೆಯಿಂದ ಬಸ್ ಸಂಚಾರ ಸುಗಮವಾಗಲಿದೆ ಎಂದು ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಪ್ರಕಟಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ನಾವು ಸೇವೆಗೆ ಹಾಜರಾಗುತ್ತೇವೆ. ಸದ್ಯ ಮುಷ್ಕರವನ್ನು ಮುಂದೂಡುತ್ತೇವೆ. ಸಾರಿಗೆ ನೌಕರರ ಮುಷ್ಕರ ಅಂತ್ಯವಾಗಿದೆ ಎಂದರು.
ಕರ್ನಾಟಕದ ಉಚ್ಛ ನ್ಯಾಯಾಲಯ ಮಧ್ಯಪ್ರವೇಶ ಮಾಡಿದೆ. ನ್ಯಾಯಮೂರ್ತಿಗಳು ಹೇಳಿದ್ದನ್ನು ಗೌರವಿಸ್ತೀವಿ. ಸೇವೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಕೋವಿಡ್ ಕಾರಣದಿಂದ ಕರ್ತವ್ಯಕ್ಕೆ ಹಾಜರಾಗಿ, ಜನರಿಗೆ ತೊಂದರೆ ನೀಡಬೇಡಿ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ. ಹೀಗಾಗಿ ನ್ಯಾಯಾಲಯ ಆದೇಶ ಮಾಡಿದಂತೆ ನಾವು ಕರ್ತವ್ಯಕ್ಕೆ ಹಾಜರಾಗುತ್ತೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ