ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್‌ಡಿಸಿವಿರ್ ಹೆಚ್ಚುವರಿ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ ಸರ್ಕಾರ ಸಿದ್ಧವಿದೆ. ರಾಜ್ಯ ಸರ್ಕಾರಗಳೂ ಪರಸ್ಪರ ಸಹಕರಿಸುವ ಮೂಲಕ ಸವಾಲನ್ನು ಸಮರ್ಥವಾಗಿ ಎದುರಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಶುಕ್ರವಾರ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಈ ವಿಷಯ ತಿಳಿಸಿದರು.
ಈಗ ಎದುರಾಗಿರುವ ವಿಪತ್ತನ್ನು ಎದುರಿಸಲು ಮುನ್ನೆಚ್ಚರಿಕೆಯ ಕ್ರಮಗಳ ಕಟ್ಟುನಿಟ್ಟಿನ ಪಾಲನೆ, ಅನಗತ್ಯ ಆಸ್ಪತ್ರೆಗೆ ದಾಖಲಾಗುವುದನ್ನು ತಪ್ಪಿಸುವುದು ಹಾಗೂ ಆಮ್ಲಜನಕದ ಸಮರ್ಪಕ ಹಾಗೂ ಮಿತಬಳಕೆಗೆ ಆದ್ಯತೆ ನೀಡುವುದು ಹಾಗೂ ಜನರಲ್ಲಿ ವಿಶ್ವಾಸ ಮೂಡಿಸುವುದು ಅತಿ ಅಗತ್ಯ ಎಂದು ಪ್ರಧಾನ ಮಂತ್ರಿಯವರು ತಿಳಿಸಿದರು.
ಆಮ್ಲಜನಕ ಮತ್ತು ರೆಮ್‌ಡಿಸಿವಿರ್ ಸದ್ಬಳಕೆಯಾಗುವ ನಿಟ್ಟಿನಲ್ಲಿ ಆತಂಕದ ಕೊಳ್ಳುವಿಕೆಯನ್ನು ನಿಯಂತ್ರಿಸುವಂತೆ ಪ್ರಧಾನಿ ಸಲಹೆ ಮಾಡಿದರು.
ಆಮ್ಲಜನಕ , ರೆಮ್‌ಡಿಸಿವಿರ್ ಅಗತ್ಯ ವಿದೆ: ಸಿಎಂ
ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಳ್ಳುತ್ತಿರುವ ಕ್ರಮಗಳು ಹಾಗೂ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಿ,
ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ರಾಜ್ಯಕ್ಕೆ ದಿನಕ್ಕೆ 1471 ಟನ್ ಆಮ್ಲಜನಕ ಹಂಚಿಕೆ ಮಾಡುವಂತೆ ಪ್ರಧಾನಿಗೆ ಮನವಿ ಮಾಡಿದರು.
ರಾಜ್ಯದಲ್ಲಿ ಆಮ್ಲಜನಕದ ಬಳಕೆ ದಿನೇ ದಿನೇ ಹೆಚ್ಚುತ್ತಿದೆ. ನಿನ್ನೆ ರಾಜ್ಯದಲ್ಲಿ 500 ಟನ್ ಬಳಕೆಯಾಗಿದೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ ಕೇವಲ 300 ಟನ್ ಆಮ್ಲಜನಕ ಹಂಚಿಕೆ ಮಾಡಿದ್ದು, ಇದೇ ಪರಿಸ್ಥಿತಿ ಮುಂದುವರೆದರೆ ಹಲವು ಆರೋಗ್ಯ ಸೇವಾ ಕೇಂದ್ರಗಳನ್ನು ಮುಚ್ಚುವ ಪರಿಸ್ಥಿತಿ ಎದುರಾಗುವುದು.
ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯಕ್ಕೆ ಏಪ್ರಿಲ್ 25 ರಿಂದ 1142 ಟನ್ ಆಮ್ಲಜನಕ ಅಗತ್ಯವಿದೆ ಹಾಗೂ ಏಪ್ರಿಲ್ 30ರ ನಂತರ 1471 ಟನ್ ಆಮ್ಲಜನಕದ ಅಗತ್ಯವಿದೆ. ಆಮ್ಲಜನಕ ಕೊರತೆ ನೀಗಿಸಿ, ಕೂಡಲೇ 1471 ಟನ್ ಆಮ್ಲಜನಕ ಹಂಚಿಕೆ ಮಾಡುವಂತೆ ಮುಖ್ಯಮಂತ್ರಿಗಳು ಪ್ರಧಾನಿಯವರಲ್ಲಿ ಮನವಿ ಮಾಡಿದರು.
ರಾಜ್ಯದಲ್ಲಿ ರೆಮ್ ಡಿಸಿವಿರ್ ಕೊರತೆಯಾಗದಂತೆ ಎಚ್ಚರ ವಹಿಸಲಾಗುತ್ತಿದ್ದು, ಮುಂದಿನ 10 ದಿನಗಳಿಗೆ 2 ಲಕ್ಷ ಡೋಸ್ ಗಳಷ್ಟು ರೆಮ್ ಡಿಸಿವಿರ್ ಒದಗಿಸುವಂತೆ ಮುಖ್ಯಮಂತ್ರಿಗಳು ಪ್ರಧಾನಿಯವರಿಗೆ ಮನವಿ ಮಾಡಿದರು.
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ