February 24, 2026

Newsnap Kannada

The World at your finger tips!

vakkaligara sanga

ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಮುಂದೂಡಿದ ರಾಜ್ಯ ಸರ್ಕಾರ

Spread the love

ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕು ವ್ಯಾಪಕವಾಗಿ ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯನ್ನು ರಾಜ್ಯ ಸರ್ಕಾರ ಮುಂದೂಡಿ ಆದೇಶ ಹೊರಡಿಸಿದೆ.

ಕೋವಿಡ್ ಕಡಿಮೆಯಾಗುವವರೆಗೂ ಚುನಾವಣೆಯನ್ನು ಮುಂದೂಡುವುದು ಅನಿವಾರ್ಯವೆಂದು ಸರ್ಕಾರ ಹೇಳಿದೆ.‌

ಚುನಾವಣೆಯನ್ನು ಮುಂದೂಡಲು ವಿನಂತಿಸಿ ಉಚ್ಚ ನ್ಯಾಯಾಲಯದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಚುನಾವಣೆ ಮುಂದೂಡುವಂತೆ ಆದೇಶಿಸಿರುತ್ತದೆ.‌

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಜಂಟಿ ಕಾರ್ಯದರ್ಶಿ ಎಂ.ವೆಂಕಟಸ್ವಾಮಿ ಒಕ್ಕಲಿಗರ ಸಂಘದ ಚುನಾವಣೆಯನ್ನು ರದ್ದು ಮಾಡಿದ್ದಾರೆ. ಕೊರೋನಾ ಕಡಮೆ ಆದ ಮೇಲೆ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ.

error: Content is protected !!