ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು, ನಿರ್ದೇಶನಾಲಯಗಳು, ಅಕಾಡೆಮಿಗಳಲ್ಲಿ ಕೆಲಸ ಮಾಡುವ ವಾಹನ ಚಾಲಕರು ಸಮಯ ಕಳೆಯಲು ಚೌಕಬಾರ ಆಡುತ್ತಾರೆ. ಆದರೆ ಈ ಆಟ ಬಿಟ್ಟು ದಿನ ಪತ್ರಿಕೆ ಓದುವ ಹವ್ಯಾಸ ರೂಪಿಸಿಕೊಂಡಿದ್ದಾರೆ.
ನಗರದ ಅಂಬೇಡ್ಕರ್ ವೀಧಿಯ ವಿಶ್ವೇಶ್ವರಯ್ಯ ಟವರ್ಸ್ ಆವರಣದಲ್ಲಿ ಮುಖ್ಯದ್ವಾರದ ಸನಿಹದಲ್ಲಿ ನಿತ್ಯವೂ ವಿರಾಮದ ಸಮಯದಲ್ಲಿ ಚೌಕಾಬಾರ ಆಡುತ್ತಾ ಕುಳಿತು ಕೊಳ್ಳುತ್ತಿದ್ದ ವಿವಿಧ ಅಧಿಕಾರಿಗಳ ಕಾರು ಚಾಲಕರಿಗೆ ಅನುಕೂಲವಾಗುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ಮೇರೆಗೆ ಗ್ರಂಥಾಲಯ ಇಲಾಖೆಯಿಂದ ಪತ್ರಿಕೆಗಳನ್ನು ಒದಗಿಸಲಾಗಿದೆ.
ಇತ್ತೀಚಿಗೆ ವಿಶ್ವೇಶ್ವರಯ್ಯ ಟವರ್ಸ್ ನ 4ನೇ ಮಹಡಿಯಲ್ಲಿರುವ ಗ್ರಂಥಾಲಯ ಇಲಾಖೆ ಕಚೇರಿಯಲ್ಲಿನ ಸಭೆಗೆ ಆಗಮಿಸಿದ್ದ ಪ್ರಾಥಮಿಕ ಸುರೇಶ್ ಕುಮಾರ್ ಭೇಟಿ ನೀಡಿ ಸಭೆ ಮುಗಿಸಿ ಹೊರಬಂದು ಕಾರಿನಲ್ಲಿ ತೆರಳುತ್ತಿದ್ದರು.
ಆಗ ಎಡಗಡೆ ಕಣ್ಣು ಹಾಯಿಸಿದಾಗ ಹತ್ತಾರು ಮಂದಿ ಗುಂಪೂಗೂಡಿದ್ದನ್ನು ನೋಡಿ ಕಾರಿನಿಂದ ಇಳಿದು ಸ್ಥಳಕ್ಕೆ ಭೇಟಿ ನೀಡಿದರು. ಆಗ ಕಾರು ಚಾಲಕರೆಲ್ಲ ಚೌಕಾಬಾರ ಆಡುವುದರಲ್ಲಿ ತೊಡಗಿದ್ದರು.
ಕಾರು ಚಾಲಕರು ಚೌಕಾಬಾರ ಆಡುವುದನ್ನು ಗಮನಿಸಿ ಅವರನ್ನು ಮಾತನಾಡಿಸಿದ ಸಚಿವರು ಗ್ರಂಥಾಲಯ ಇಲಾಖೆ ನಿರ್ದೇಶಕರನ್ನು ಕರೆದು, ಚಾಲಕರಿಗೆ ವಿರಾಮ ದೊರೆತಾಗ ಓದಲು ಅನುಕೂಲವಾಗುವಂತೆ ಈ ಸ್ಥಳಕ್ಕೆ ಪತ್ರಿಕೆಗಳನ್ನು ಪೂರೈಸಲು ಸೂಚಿಸಿದರು.
ಸಚಿವರ ನಿರ್ದೇಶನದಂತೆ ಗ್ರಂಥಾಲಯ ಇಲಾಖೆ ನಿರ್ದೇಶಕರು ಚಾಲಕರು ಚೌಕಾಬಾರ ಆಡುತ್ತಿದ್ದ ಸ್ಥಳಕ್ಕೆ ಪತ್ರಿಕೆಗಳನ್ನು ಪೂರೈಸುತ್ತಿದ್ದಾರೆ. ಚಾಲಕರೆಲ್ಲ ಚೌಕಾಬಾರ ಆಟದ ಬದಲಿಗೆ ಪತ್ರಿಕೆ ಓದುವುದರಲ್ಲಿ ಮಗ್ನರಾಗಿದ್ದಾರೆ.
ಈಗ ಚೌಕಾಬಾರ ಆಡುವ ಸ್ಥಳ ವಾಚಾನಾಲಯವಾಗಿ ಮಾರ್ಪಟ್ಟಿರುವುದು ಚಾಲಕರಿಗೆ ಖುಷಿಯಾಗಿದೆ.
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ