February 24, 2026

Newsnap Kannada

The World at your finger tips!

covid , warning , raise

ಕುಣಿಗಲ್ ತಾಲೂಕಿನಲ್ಲಿ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಕೋವಿಡ್ ಗೆ ಬಲಿ

Spread the love

ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ.‌ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ಕುಣಿಗಲ್ ತಾಲೂಕಿನ ಉಜ್ಜಯನಿ ಪ್ರೌಢ ಶಾಲೆಯ ಶಿಕ್ಷಕ ಶಿವರಾಮೇಗೌಡ, ಮಲ್ಲಿಪಾಳ್ಯ ಪ್ರೌಢ ಶಾಲೆಯ ಪರಮೇಶ್ವರ್ ಆಚಾರ್ ಹಾಗೂ ತುರುಗೂರು ಪ್ರಾಥಮಿಕ ಶಾಲಾ ಶಿಕ್ಷಕ ಕೃಷ್ಣಪ್ಪ ಕೊರೊನ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ ನಡುವೆ ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ, ಅತಿ ಹೆಚ್ಚು ಸೋಂಕಿತರು ಇರುವ 18 ಬಡವಾಣೆಗಳನ್ನು ಕೋವಿಡ್ ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ.

error: Content is protected !!