ಕಳೆದ ರಾತ್ರಿ ಆಕ್ಸಿಜನ್ ಕೊರತೆ ಯಿಂದಾಗಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 20ಕ್ಕೂ ಹೆಚ್ಚು ಕೊರೋನಾ ರೋಗಿಗಳ ಸಾವನ್ನಪ್ಪಿದ ಘಟನೆ ಜಿಲ್ಲಾ ಆಸ್ಪತ್ರೆಯಲ್ಲಿ ಜರುಗಿದೆ.
ಕಳೆದ ರಾತ್ರಿ ಆಕ್ಸಿಜನ್ ಇಲ್ಲದೆ ರೋಗಿಗಳು ಪರದಾಟ ನಡೆಸಿದ್ದರು. ವಿಷಯ ತಿಳಿದ ಬಳಿಕ ಕೆಲ ಹೊತ್ತಿನಲ್ಲಿ ಸಂಸದ ಪ್ರತಾಪ್ ಸಿಂಹ 50 ಜಂಬೋ ಆಕ್ಸಿಜನ್ ಸಿಲಿಂಡರ್ಗಳನ್ನು ಕಳಿಸಿಕೊಟ್ಟಿದ್ದರು.
ಆದರೆ ಆಕ್ಸಿಜನ್ ಸಿಲಿಂಡರ್ಗಳು ಬರುವ ವೇಳೆಗೆ ಹಲವು ಕೊರೊನಾ ರೋಗಿಗಳು ಕೊನೆಯುಸಿರೆಳೆದಿದ್ದಾರೆ.
ನಿನ್ನೆ ರಾತ್ರಿ 16 ಮಂದಿ ಹಾಗೂ ಇಂದು ಬೆಳಗಿನ ಜಾವ 4ಕ್ಕೂ ಹೆಚ್ಚು ರೋಗಿಗಳು ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ರೋಗಿಗಳ ಸಂಬಂಧಿಕರು ಜಿಲ್ಲಾಸ್ಪತ್ರೆಗೆ ಧಾವಿಸುತ್ತಿದ್ದಾರೆ. ತಮ್ಮ ಕುಟುಂಬದ ಸದಸ್ಯರನ್ನು ಕಳೆದುಕೊಂಡವರ ಆಕ್ರಂದನ ಹೆಚ್ಚಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಸ್ಪತ್ರೆ ಮುಂಭಾಗ ಪೊಲೀಸ್ ಭದ್ರತೆ ಒದಗಿಸಲಾಗಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ