ಆರೋಗ್ಯ ಸಚಿವ ಸುಧಾಕರ್ ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಸುಳ್ಳು ಹೇಳಿಕೆ ನೀಡಿದ್ದಾರೆ. ವಸ್ತುಸ್ಥಿತಿಯನ್ನು ಮರೆಮಾಚಿದ್ದಾರೆ. ಆಕ್ಸಿಜನ್ ಕೊರತೆಯಿಂದಲೇ 24 ಮಂದಿ ಸಾವನ್ನಪ್ಪಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ ಆಸ್ಪತ್ರೆಗೆ ಪ್ರತಿದಿನ 350 ಸಿಲಿಂಡರ್ ಆಕ್ಸಿಜನ್ ಬೇಕು, ಆದರೆ ಭಾನುವಾರ 126 ಸಿಲಿಂಡರ್ ಮಾತ್ರ ಪೂರೈಕೆ ಮಾಡಿದ್ದಾರೆ ಅಷ್ಟೇ. ಆದ್ದರಿಂದ ಆಕ್ಸಿಜನ್ ಬೇಕಾದ ರೋಗಿಗಳಿಗೆ ಆಕ್ಸಿಜನ್ ಪೂರೈಕೆ ಆಗಿಲ್ಲ. ಆದ್ದರಿಂದಲೇ 24 ಮಂದಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಡೀನ್ ನನ್ನ ಎದುರು ಒಪ್ಪಿಕೊಂಡರು ಎಂದು ಹೇಳಿದರು.

ರೋಗಿಗಳ ಜವಾಬ್ದಾರಿ ವಹಿಸಿಕೊಂಡಿ ರುವ ಆರೋಗ್ಯ ಸಚಿವ 3 ಮಂದಿ ಮಾತ್ರ ಸಾವನ್ನಪ್ಪಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ. ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ಕೊರೊನಾ ಎರಡನೇ ಅಲೆಗೆ ಸಿದ್ಧತೆ ಮಾಡಿಕೊಂಡಿಲ್ಲ. ಆದ್ದರಿಂದಲೇ ಸಾಕಷ್ಟು ಸಾವುಗಳು ಸಂಭವಿಸುತ್ತಿವೆ. ಆದ್ದರಿಂದ ಸತ್ಯ ಏನು ಎಂಬುದು ಎಲ್ಲರಿಗೂ ತಿಳಿಯಲು ಸ್ವತಂತ್ರ್ಯ ಸಂಸ್ಥೆ ಮೂಲಕ ತನಿಖೆ ನಡೆಸಬೇಕಿದೆ ಎಂದು ಒತ್ತಾಯಿಸಿದರು.
ಸಿಎಂ, ಆರೋಗ್ಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ನೀಡಬೇಕು. ಉಸ್ತುವಾರಿ ಸಚಿವರು ಕೊರೊನಾ ಎರಡನೇ ಅಲೆ ಆರಂಭವಾದ ಮೇಲೆ ಸಭೆಯೇ ಮಾಡಿಲ್ಲ. ಸಚಿವರು ಬೆಂಗಳೂರಿನಲ್ಲಿ ಕುಳಿತು ಮಜಾ ಮಾಡೋಕೆ ಇದ್ದರಾ..? ಮೈಸೂರು ಡಿಸಿ ಅಂತಹ ನಿರ್ಧಾರ ಮಾಡಿದ್ದರೆ ಅವರ ಮೇಲೂ ಕ್ರಮ ಆಗಬೇಕು. ಸತ್ತವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ