ಡಾ. ರಾಜ್ ಕುಮಾರ್ ಅಮೋಘ ನಟನೆ ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮ ಇಂದು ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕೋವಿಡ್ ಪಾಸಿಟಿವ್ ನಿಂದಾಗಿ ಎರಡು ದಿನಗಳ ಹಿಂದೆ ಚಿಕಿತ್ಸೆಗಾಗಿ ದಾಖಲಾಗಿದ್ದರು.ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.
ನಿರ್ದೇಶಕ ರೇಣುಕಾ ಶರ್ಮ ಅನಂತ ನಾಗ್ – ಮಾಧವಿ ಅಭಿನಯದ ಅನುಪಮ ಚಿತ್ರ ನಿರ್ದೇಶನ ಮಾಡುವುದರ ಮೂಲಕ ಚಿತ್ರ ರಂಗಕ್ಕೆ ಪಾದಾರ್ಪಣೆ ಮಾಡಿದರು.
ಐತಿಹಾಸಿಕ ಹಾಗೂ ಭಕ್ತಿ ಪ್ರಧಾನ ಚಿತ್ರ ಗಳನ್ನು ಅರ್ಥಪೂರ್ಣವಾಗಿ ತೆರೆಗೆ ಅರ್ಪಿಸುವಲ್ಲಿ ನಿರ್ದೇಶಕ ರೇಣುಕಾ ಶರ್ಮ ಎತ್ತಿದ ಕೈ. ರಾಜ್ ಕುಮಾರ್ ಅಭಿನಯದ ಕವಿರತ್ನ ಕಾಳಿದಾಸ ಅತ್ಯಂತ ಯಶಸ್ವಿ ಚಿತ್ರವಾಗಿತ್ತು.
ನಮ್ಮೂರ ದೇವತೆ, ಶಹಬ್ಬಾಸ್ ವಿಕ್ರಮ್, ಅಂಜದ ಗಂಡು, ಶಬರಿಮಲೈ ಅಯ್ಯಪ್ಪ, ಶ್ರೀ ಅಯ್ಯಪ್ಪ, ಬರ್ಜರಿ ಗಂಡ, ಕಿಂದರಿ ಜೋಗಿ, ಕೊಲ್ಲಾಪುರ ಶ್ರೀ ಮೂಕಾಂಬಿಕೆ, ಮಹಾಸಾದ್ವಿ ಮಲ್ಲಮ್ಮ, ಚಿತ್ರವೂ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ