ಬೆಂಗಳೂರು: ಹಿರಿಯ ನಟ ಹಾಗೂ ರಂಗಭೂಮಿ ಕಲಾವಿದ ರಾಜಾರಾಂ (84) ಕೊರೋನಾಗೆ ಬಲಿಯಾಗಿದ್ದಾರೆ
ರಂಗಭೂಮಿಯಲ್ಲೇ ಹೆಚ್ಚು ಸಕ್ರಿಯವಾಗಿದ್ದ ರಾಜಾರಾಂ ಅವರಿಗೆ ಕೊರೊನಾ ಸೋಂಕು ಧೃಡವಾಗಿತ್ತು ಎಂದು ಹೇಳಲಾಗುತ್ತಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನಟ ಇಂದು ಕೊನೆಯುಸಿರೆಳೆದಿದ್ದಾರೆ.
ಕೊರೊನಾ ಮಹಾಮಾರಿಗೆ ಕಲಾ ಸೇವೆ ಮಾಡುತ್ತಿರುವ ಹಲವಾರು ಮಂದಿ ಕಲಾವಿದರು ಕೊರೊನಾಗೆ ಬಲಿಯಾಗಿದ್ದಾರೆ. ಶಂಖನಾದ ಅರವಿಂದ್, ರೇಣುಕಾ ಶರ್ಮಾ, ರಾಮು ಸೇರಿದಂತೆ ಹಲವರು ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.
1971 ರಲ್ಲಿ ಮೊದಲ ಸಿನಿಮಾ:
1971ರಲ್ಲಿ ಕೃಷ್ಣಸ್ವಾಮಿ ನಿರ್ದೇಶಕ ಪಾಪಪುಣ್ಯ ಸಿನಿಮಾ ರಾಜಾರಾಂ ಅವರ ಅಭಿನಯದ ಮೊದಲ ಸಿನಿಮಾ. ಸರೋಜಾ ದೇವಿ, ಕಲ್ಯಾಣ್ ಕುಮಾರ್ ಅಶ್ವತ್ಥ್ ಪ್ರಮುಖ ಪಾತ್ರದಲ್ಲಿದ್ದರು.
ವಿಧಾನಸೌಧದಲ್ಲಿ ಟೈಪಿಸ್ಟ್ ಆಗಿ ಕೆಲಸ ಮಾಡಿಕೊಂಡೇ ಸಿನಿಮಾ ಹಾಗೂ ರಂಗಭೂಮಿಯತ್ತ ಒಲವು ತೋರಿದ ರಾಜಾರಾಂ. ನಟ ಲೋಕೇಶ್ ಅವರೊಂದಿಗೆ ಬಹಳ ಹಳೆಯ ಗೆಳೆತನವಿತ್ತು. ರಂಗಭೂಮಿಯಲ್ಲಿ ಒಟ್ಟಿಗೆ ಅಭಿನಯಿಸುತ್ತಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ