ತನ್ನ ವಿವಾಹೇತರ ಸಂಬಂಧ ಪತ್ನಿಗೆ ತಿಳಿದು ಗಲಾಟೆ ನಡೆದ ನಂತರ ಪೇದೆಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಬಚಾವ್ ಆದರೆ, ಆತನೊಂದಿಗೆ ಸಂಬಂಧ ಇಟ್ಟು ಕೊಂಡಿದ್ದರೆಂದು ಹೇಳಲಾದ ಮಹಿಳಾ ಎಸ್ಐ ಕೂಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ.
ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಚುಂಡೂರು ಠಾಣೆಯ ಸಬ್ಇನ್ಸ್ಪೆಕ್ಟರ್ ಶ್ರಾವಣಿ (35) ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳಿದಿದ್ದಾರೆ.
ಪೇದೆ ರವೀಂದ್ರ ಜತೆ ಶ್ರಾವಣಿ ಕಳೆದ ಶನಿವಾರ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ಕೈದು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಡಿದ ಶ್ರಾವಣಿ ನಿನ್ನೆ ಆಸ್ಪತ್ರೆಯಲ್ಲಿ ಮೃತಪಟ್ಟರು.
ಪ್ರಕಾಶಂ ಜಿಲ್ಲೆಯ ಕಂದುಕುರ್ ಮೂಲದ ಶ್ರಾವಣಿ 2018ರಲ್ಲಿ ಸಬ್ಇನ್ಸ್ಪೆಕ್ಟರ್ ಆಗಿ ನೇಮಕಗೊಂಡಿದ್ದರು. ತರಬೇತಿಯ ಬಳಿಕ ನರಸರಾವ್ಪೇಟೆಯ ದಿಶಾ ಪೊಲೀಸ್ ಠಾಣೆಗೆ ಮೊದಲ ನೇಮಕಾತಿ ಆದರು.
ಏಳು ತಿಂಗಳ ಹಿಂದೆ ಶ್ರಾವಣಿ ಚುಂಡೂರು ಠಾಣೆಗೆ ವರ್ಗಾವಣೆ ಆಗಿದ್ದರು.ಆತ್ಮಹತ್ಯೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಆದರೆ, ಮೂಲಗಳ ಪ್ರಕಾರ ಇಬ್ಬರ ನಡುವೆ ವಿವಾಹೇತರ ಸಂಬಂಧ ಇತ್ತೆಂದು ಹೇಳಲಾಗಿದೆ.
ಈ ಸಂಗತಿ ರವೀಂದ್ರ ಪತ್ನಿ, ಉನ್ನತ ಅಧಿಕಾರಿಗಳಿಗೆ ದೂರು ನೀಡಿದ್ದರು. ಬಳಿಕ ರವೀಂದ್ರನನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿತ್ತು.
ಈ ಮಧ್ಯೆ ರವೀಂದ್ರ ವಿಷ ಕುಡಿಯುತ್ತಿ ರುವ ವಿಡಿಯೋವನ್ನು ಎಸ್ಐ ಶ್ರಾವಣಿಗೆ ಕಳುಹಿಸಿದ್ದ ಎಂದು ತಿಳಿದುಬಂದಿದೆ.
ಈ ವಿಡಿಯೋ ನೋಡಿ ಶ್ರಾವಣಿ, ರವೀಂದ್ರ ಇದ್ದ ಸ್ಥಳಕ್ಕೆ ತೆರಳಿದ್ದಾಳೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದು ತಾಳ್ಮೆ ಕಳೆದುಕೊಂಡ ಶ್ರಾವಣಿ ಸಹ ವಿಷ ಕುಡಿದಿದ್ದಾರೆ ಎನ್ನಲಾಗಿದೆ.
ಸ್ಥಳೀಯರು ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ, ಶ್ರಾವಣಿ ನಿನ್ನೆ ಮೃತಪಟ್ಟರೆ, ರವೀಂದ್ರ ಇನ್ನು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ