ಕೋಲಾರ ಜಿಲ್ಲೆಯಲ್ಲಿ ಅಕ್ಕ-ತಂಗಿಯನ್ನು ಮದುವೆಯಾಗಿದ್ದ ಉಮಾಪತಿ ವಿರುದ್ಧ ಈಗ ದೂರು ದಾಖಲಾಗಿದೆ. ಪೊಲೀಸರು ವರನನ್ನು ಬಂಧಿಸಿದ್ದಾರೆ.
ಮೇ.07 ರಂದು ಜಿಲ್ಲೆಯ ಉಮಾಪತಿ ಎಂಬಾತ ಅಕ್ಕ-ತಂಗಿಯನ್ನು ಒಂದೇ ಮಂಟಪದಲ್ಲಿ ಮದುವೆಯಾಗಿದ್ದ.
ಇಬ್ಬರನ್ನು ಒಂದೇ ಮಂಟಪದಲ್ಲಿ ಮದುವೆಯಾದ ಉಮಾಪತಿ, ವಧುವಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು.
ಫೋಟೋ ಹೆಚ್ಚು ವೈರಲ್ ಆದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಘಟನೆಯ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದರು.
ಬಂಧನಕ್ಕೆ ಕಾರಣ ಏನು ?
ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ವಿಚಾರಣೆ ನಡೆಸಿದ ಪೊಲೀಸರು, ಇಬ್ಬರು ಸಹೋದರಿಯರಲ್ಲಿ ತಂಗಿಗೆ ಇನ್ನು ಅಪ್ರಾಪ್ತ ವಯಸ್ಸು.
ಈ ಕಾರಣಕ್ಕಾಗಿ ಪೊಲೀಸರು ವರ ಉಮಾಪತಿ ಸೇರಿದಂತೆ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದ್ದಾರೆ.
ಮನೆಯ ಹೆಣ್ಣು ಮಕ್ಕಳಿಬ್ಬರನ್ನು ಮದುವೆಯಾಗಬೇಕು ಎಂಬ ವಧುವಿನ ತಂದೆ ಬೇಡಿಕೆ ಇಟ್ಟ ಕಾರಣಕ್ಕೆ ವರ ಮದುವೆಗೆ ಒಪ್ಪಿಗೆ ಸೂಚಿಸಿದ್ದ ಎನ್ನಲಾಗಿದೆ. ಮದುವೆಯಾಗಿ ಉಮಾಪತಿ ಜೈಲು ಸೇರಿದ. ವಿಚಾರಣೆ ನಡೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ