February 22, 2026

Newsnap Kannada

The World at your finger tips!

m r ravi

ಚಾಮರಾಜನಗರ ಡಿಸಿ ರವಿ ವರ್ಗಾವಣೆ : ಸತೀಶ್ ಹೊಸ ಡಿಸಿ

Spread the love

ಆಕ್ಸಿಜನ್ ದುರಂತ ಆರೋಪದ ಅಡಿ ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ವರ್ಗಾವಣೆ ಮಾಡಲಾಗಿದೆ.

ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗಿ 24 ಕೋವಿಡ್ ಸೋಂಕಿತರು ಮೃತಪಟ್ಟ ಪ್ರಕರಣದ ಹಿನ್ನಲೆಯಲ್ಲಿ ವರ್ಗಾವಣೆ ಮಾಡಲಾಗಿದೆ.

ಯಾವುದೇ ಹುದ್ದೆಯನ್ನು ನೀಡದೆ ಡಾ. ಎಂ. ಆರ್. ರವಿ ವರ್ಗಾವಣೆ ಮಾಡಲಾಗಿದೆ.

ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ಬಿ. ಸಿ. ಸತೀಶ್ ನೇಮಕಗೊಂಡಿದ್ದಾರೆ. ಗುರುವಾರವೇ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಆಕ್ಸಿಜನ್ ದುರಂತಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ಆಸ್ಪತ್ರೆ ಸಿಬ್ಬಂದಿ ಕಾರಣ ಎಂದು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ಕರ್ನಾಟಕ ಹೈಕೋರ್ಟ್‌ಗೆ ವರದಿ ನೀಡಿತ್ತು.

ಬಿ. ಸಿ. ಸತೀಶ್ ಧಾರವಾಡ ಜಿಲ್ಲಾ ಪಂಚಾಯಿತಿ ಸಿಇಓ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಕೆಲವು ದಿನಗಳ ಹಿಂದೆಯೇ ಅವರನ್ನು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು. ಆದರೆ ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಡಾ. ಎಂ. ಆರ್. ರವಿ ಜಿಲ್ಲಾಧಿಕಾರಿಯಾಗಿ ಮುಂದುವರೆದಿದ್ದರು.

error: Content is protected !!