ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ತಗ್ಗದ ಹಿನ್ನೆಲೆಯಲ್ಲಿ ಮತ್ತೆ 14 ದಿನಗಳ ಕಾಲ ಲಾಕ್‍ಡೌನ್ ಅಂದರೆ ಜೂನ್ 7ರ ತನಕ ವಿಸ್ತರಣೆ ಮಾಡಲಾಗಿದೆ .
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರದ ನಿರ್ಧಾರವನ್ನು ಅಧೀಕೃತ ವಾಗಿ ಘೋಷಣೆ ಮಾಡಿದರು.
ಕೋವಿಡ್ ಪರಿಸ್ಥಿತಿ ಮತ್ತು ಲಾಕ್‍ಡೌನ್ ವಿಸ್ತರಣೆ ಕುರಿತು ಶುಕ್ರವಾರ ಕಾವೇರಿ ನಿವಾಸದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಡಿಸಿಎಂ ಅಶ್ವಥ್ ನಾರಾಯಣ, ಸಚಿವ ಆರ್.ಅಶೋಕ್, ಶಾಸಕ ಎಸ್.ಆರ್.ವಿಶ್ವನಾಥ್, ಸಿಎಸ್ ರವಿಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಆರೋಗ್ಯ ಇಲಾಖೆ ಎಸಿಎಸ್ ಜಾವೇದ್ ಅಖ್ತರ್ ಪಾಲ್ಗೊಂಡಿದ್ದ
ಸಭೆ ಬಳಿಕ ಸುದ್ದಿಗಾರರಿಗೆ ಈ ನಿರ್ಧಾರ ತಿಳಿಸಿದರು.
ಲಾಕ್‍ಡೌನ್‍ನಿಂದ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ. ಜನರ ಹಿತದೃಷ್ಟಿಯಿಂದ ಮತ್ತೆ ಲಾಕ್‍ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ, ಜನ ಸಹಕರಿಸಬೇಕು ಎಂದರು
ಕೊರೊನಾ ನಿಯಂತ್ರಣಕ್ಕೆ ಮತ್ತೆ ಎರಡು ವಾರಗಳ ಕಾಲ ಲಾಕ್‍ಡೌನ್ ವಿಧಿಸಲಾಗುತ್ತಿದೆ, ಮೇ 24 ರಿಂದ ಜೂನ್ 7ರ ವರೆಗೆ ಲಾಕ್‍ಡೌನ್ ವಿಸ್ತರಣೆ ಮಾಡಲಾಗಿದೆ. ಈ ಹಿಂದಿನ ಲಾಕ್‍ಡೌನ್ ಮಾರ್ಗಸೂಚಿಗಳೇ ಮುಂದುವರಿಯುತ್ತವೆ ಎಂದು ಲಾಕ್‍ಡೌನ್ ಮಾರ್ಗಸೂಚಿಗಳ ಕುರಿತು ಸಿಎಂ ಸ್ಪಷ್ಟಪಡಿಸಿದ್ದಾರೆ.
ಬೆಳಗ್ಗೆ 10 ಗಂಟೆ ನಂತರ ಸಹ ಜನ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, 9 .45 ಕ್ಕೆ ಮನೆಗೆ ಸೇರಬೇಕು, 10 ಗಂಟೆ ಬಳಿಕ ಯಾರೂ ಸಂಚರಿಸಕೂಡದು ಎಂದು ಪೊಲೀಸರಿಗೆ ತಿಳಿಸಿದ್ದಾರೆ.
ಬೆಳಗ್ಗೆ 10 ಗಂಟೆ ಬಳಿಕ ಯಾರೇ ಓಡಾಡಿದರೂ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ಈ ಕುರಿತು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ