ಪತಿ ಕೊರೋನಾಗೆ ಬಲಿಯಾದ ಮೇಲೆ ಅಂತ್ಯ ಸಂಸ್ಕಾರ ಮುಗಿಸಿ ಬಂದ ಪತ್ನಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಗಮಂಗಲ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಶನಿವಾರ ಜರುಗಿದೆ.
ಕಳೆದ 11 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಕಿರಣ್ ಹಾಗೂ ಪೂಜಾ ದುರಂತ ಸಾವು ಕಂಡಿದ್ದಾರೆ.
ಕಿರಣ್ ಮತ್ತು ಪೂಜಾ ವಿವಾಹ ಮಾಡಿಕೊಂಡು ಬೆಂಗಳೂರಿನ ಬೊಮ್ಮನಹಳ್ಳಿ ಯಲ್ಲಿ ವಾಸವಾಗಿದ್ದರು.
ಕೊರೋನಾ ಸೋಂಕಿಗೆ ಒಳಗಾಗಿದ್ದ ಕಿರಣ್ ಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ಕೂಡಲೇ ಕಿರಣ್ ನನ್ನು ಖಾಸಗಿ ಆಸ್ಪತ್ರೆ ಗೆ ದಾಖಲು ಮಾಡಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದರು.
ಮೃತದೇಹವನ್ನು ಸ್ವ ಗ್ರಾಮಕ್ಕೆ ತಂದು ಅಂತ್ಯ ಸಂಸ್ಕಾರ ಮಾಡಿ ಮನೆಗೆ ಹಿಂತಿರುಗಿದ ಮೇಲೆ ಕಿರಣ್ ಪತ್ನಿ ಪೂಜಾ ಕೂಡ ರೂಂಗೆ ಹೋಗಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ