February 25, 2026

Newsnap Kannada

The World at your finger tips!

kalige g

ಸಾಮೂಹಿಕ ಅತ್ಯಾಚಾರ : ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳ ಮೇಲೆ ಗುಂಡು ಹಾರಿಸಿದ ಪೋಲಿಸರು

Spread the love

ಬಾಂಗ್ಲಾ ದೇಶದ 22 ವರ್ಷದ ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಮೇಲೆ ಗುಂಡು ಹೊಡೆದು ಕಾಲಿಗೆ ಏಟು ಮಾಡಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

ಬೆಂಗಳೂರಿನ ಕೆ. ಚನ್ನಸಂದ್ರದಲ್ಲಿ ಆರೋಪಿಗಳ ಮೇಲೆ ಫೈರಿಂಗ್ ಮಾಡಲಾಗಿದೆ. ಸ್ಥಳ ಮಹಜರು ಮಾಡುವ ವೇಳೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಆರೋಪಿಗಳಾದ ರಿದಾಯ್ ಬಾಬು ಮತ್ತು ಸಾಗರ್ ಪರಾರಿಯಾಗಲೆತ್ನಿಸಿದ್ದಾರೆ.

ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚನೆ ನೀಡಿದರೂ, ಕೇಳದೆ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಆಗ ರಿದಾಯ್ ಬಾಬು ಮತ್ತು ಸಾಗರ್ ಅವರ ಕಾಲಿಗೆ ಗುಂಡು ಹಾರಿಸಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಬಾಂಗ್ಲಾ ಮೂಲದ ಯುವಕರ ತಂಡ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದು, ವೇಶ್ಯಾವಾಟಿಕೆಯಲ್ಲಿ ತೊಡಗಿಕೊಂಡಿದ್ದರು.10 ದಿನಗಳ ಹಿಂದೆ ಸ್ನೇಹಿತೆಯಾಗಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು

ಆಕೆಯಯನ್ನು ಹಿಂಸಿಸಿ ಅತ್ಯಾಚಾರ ಎಸಗಿ ವಿಡಿಯೋ ಮಾಡಿ ಹರಿಬಿಟ್ಟಿದ್ದರು. ದೇಶಾದ್ಯಂತ ವಿಡಿಯೋ ಬಗ್ಗೆ ಗಮನ ಸೆಳೆದಿತ್ತು. ನಿನ್ನೆ ರಾಮಮೂರ್ತಿ ನಗರ ಠಾಣೆ ಪೊಲೀಸರು ಕೃತ್ಯದಲ್ಲಿ ಭಾಗಿಯಾಗಿದ್ದ ಯುವತಿ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಇಂದು ಬೆಳಿಗ್ಗೆ ಸ್ಥಳ ಮಹಜರಿಗೆ ಹೋಗಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.

error: Content is protected !!