February 22, 2026

Newsnap Kannada

The World at your finger tips!

pranitha

ನಿತಿನ್ ಜೊತೆ ಸಪ್ತಪದಿ ತುಳಿದ ನಟಿ‌ ಪ್ರಣಿತಾ

Spread the love

ಸ್ಯಾಂಡಲ್‍ವುಡ್ ನಟಿ ಪ್ರಣಿತಾ ಸುಭಾಷ್ , ಮಾಲ್ ವೊಂದರ ಪಾಲುದಾರ ನಿತಿನ್ ರಾಜು ಜೊತೆ ಭಾನುವಾರ ಸಪ್ತಪದಿ ತುಳಿದಿದ್ದಾರೆ.

ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮದುವೆ ತುಂಬಾ ಸರಳವಾಗಿ ನಡೆದಿದೆ ಕಾರ್ಯಕ್ರಮಕ್ಕೆ ವಧು-ವರರ ಕುಟುಂಬಸ್ಥರನ್ನು ಮಾತ್ರ ಆಹ್ವಾನಿಸಲಾಗಿತ್ತು.

ಸ್ನೇಹಿತರೊಬ್ಬರು ನೂತನ ವಧು-ವರರ ಜೊತೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ.‌

ಪ್ರಣಿತಾ ದಂಪತಿ ತಮ್ಮ ಮದುವೆ ಯನ್ನು ಅದ್ಧೂರಿಯಾಗಿ ಮಾಡಲು ನಿರ್ಧರಿಸಿದ್ದರು. ಆದರೆ ಮಹಾಮಾರಿ ಕೊರೊನಾ ವೈರಸ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ಲಾಕ್ ಡೌನ್ ನಿಂದಾಗಿ ಮದುವೆ ಸಮಾರಂಭಗಳಿಗೆ ಇಂತಿಷ್ಟೇ ಜನ ಸೇರಬೇಕೆಂಬ ನಿಯಮ ತರಲಾಗಿದೆ. ಹೀಗಾಗಿ ಅತ್ಯಾಪ್ತರ ಸಮ್ಮುಖದಲ್ಲಿ ಸರಳವಾಗಿ ಪ್ರಣಿತಾ ಮದುವೆ ನಡೆದಿದೆ.

error: Content is protected !!