ಮನೆ , ಅಂಗಡಿ ಮಾಲೀಕರು ಮತ್ತು ಬಾಡಿಗೆದಾರರಿಗೆ ಸಹಾಯವಾಗುವ ಹೊಸ ಕಾಯ್ದೆಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ‘ಮಾದರಿ ಬಾಡಿಗೆ ಕಾಯ್ದೆ’ಗೆ ಅನುಮೋದನೆ ನೀಡಲಾಗಿದೆ.
ಮನೆಗಳನ್ನು ಬಾಡಿಗೆ ನೀಡುವ ವ್ಯವಸ್ಥೆಗೆ ಉದ್ಯಮ ಸ್ವರೂಪ ನೀಡಲಾಗಿದೆ. ಈ ಉದ್ಯಮದಲ್ಲಿ ಪಾಲ್ಗೊಳ್ಳುವಂತೆ ಖಾಸಗಿ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶವನ್ನು ಈ ಕಾಯ್ದೆ ಹೊಂದಿದೆ. ವಸತಿ ಕ್ಷೇತ್ರ ಎದುರಿಸುತ್ತಿರುವ ಕೊರತೆಯನ್ನು ನೀಗಿಸಲು ಸಾಧ್ಯವಾಗಲಿದೆ.
ಕಾಯ್ದೆಯ ಸ್ವರೂಪ ಹೇಗಿದೆ?
- ಮಾಲೀಕರು ಮತ್ತು ಬಾಡಿಗೆದಾರರಿಗೆ ತ್ವರಿತವಾಗಿ ನ್ಯಾಯ ಒದಗಿಸಲು ಬಾಡಿಗೆ ಪ್ರಾಧಿಕಾರ ರಚನೆ ಮಾಡಬೇಕು.
- ಮಾಲೀಕರು ಭದ್ರತಾ ಠೇವಣಿಯಾಗಿ ಬಾಡಿಗೆದಾರರಿಂದ ಕೇವಲ 2 ತಿಂಗಳ ಬಾಡಿಗೆಯನ್ನು ಮಾತ್ರ ಪಡೆಯಬೇಕು.
- ವಾಣಿಜ್ಯ ಕಟ್ಟಡಗಳಿಗೆ ಭದ್ರತಾ ಠೇವಣಿಯಾಗಿ 6 ತಿಂಗಳ ಹಣವನ್ನು ಮಾತ್ರ ಪಡೆಯಬೇಕು.
- ಬಾಡಿಗೆ ವಿಚಾರದಲ್ಲಿ ಸಮಸ್ಯೆಯಾದಲ್ಲಿ ಜಿಲ್ಲಾ ಬಾಡಿಗೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬಹುದು.
- ಒಪ್ಪಂದ ಮುಗಿದ ಬಳಿಕವೂ ಮನೆಯನ್ನು ಖಾಲಿ ಮಾಡದೇ ಇದ್ದಲ್ಲಿ ಮಾಲೀಕ ಮುಂದಿನ 2 ತಿಂಗಳ ಅವಧಿಗೆ ಬಾಡಿಗೆಯನ್ನು ದ್ವಿಗುಣ ಮಾಡಬಹುದು.
- 2 ತಿಂಗಳ ಬಳಿಕವೂ ಮನೆ ಖಾಲಿ ಮಾಡದೇ ಇದ್ದರೆ ಬಾಡಿಗೆಯನ್ನು 4 ಪಟ್ಟು ಹೆಚ್ಚಿಸಬಹುದು.
- ವಿವಾದದ ಸಂದರ್ಭದಲ್ಲಿ ಮಾಲೀಕರು ವಿದ್ಯುತ್ ಮತ್ತು ನೀರು ಸರಬರಾಜನ್ನು ಕಡಿತಗೊಳಿಸುವಂತಿಲ್ಲ.
- ಒಪ್ಪಂದದ ಅವಧಿ ಇರುವವರೆಗೆ ಬಾಡಿಗೆ ದರವನ್ನು ಇದ್ದಕ್ಕಿದ್ದಂತೆ ಹೆಚ್ಚಿಸಲು ಸಾಧ್ಯವಿಲ್ಲ. ಬಾಡಿಗೆ ಪರಿಷ್ಕರಿಸುವ 3 ತಿಂಗಳ ಮೊದಲು ಮಾಲೀಕ ನೋಟಿಸ್ ನೀಡಬೇಕಾಗುತ್ತದೆ.
- ಕಟ್ಟಡಕ್ಕೆ ಹಾನಿಯಾಗಿದ್ದರೆ ರಿಪೇರಿಗೆ ಬಾಡಿಗೆದಾರನೇ ಹಣವನ್ನು ನೀಡಬೇಕು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ