ಯಾರೂ ಕೂಡ ನನ್ನ ಪರ ಸಹಿ ಸಂಗ್ರಹ ಮಾಡುವುದು ಬೇಡ. ಸಂಕಷ್ಟದಲ್ಲಿರುವ ಜನರಿಗೆ ನೇರವಾಗಿ ಸ್ಪಂದಿಸುವ ಕೆಲಸ ಮಾಡಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ವಿರೋಧಿಸಿ, ಬಿಎಸ್ವೈ ಪರ ಅವರ ಅಪ್ತ ರೇಣುಕಾಚಾರ್ಯ ಸಹಿ ಸಂಗ್ರಹಕ್ಕೆ ಮುಂದಾಗಿದ್ದರು.
ಈ ಸಂಬಂಧ ಟ್ವೀಟ್ ಮಾಡಿ ಮನವಿ ಮಾಡಿಕೊಂಡಿರುವ ಯಡಿಯೂರಪ್ಪ.. ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.
ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ ಎಂದಿದ್ದಾರೆ.
More Stories
ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ