January 1, 2025

Newsnap Kannada

The World at your finger tips!

mandya , news , politics

ಮನೆ ಸಕ್ರಮಕ್ಕೆ ಅರ್ಜಿ ಸಲ್ಲಿಸಲು 2022 ರ ಮಾಚ್೯ ಅಂತ್ಯದವರೆಗೂ ಸಮಯ ವಿಸ್ತರಣೆ

Spread the love

ಸರ್ಕಾರಿ ಜಾಗದಲ್ಲಿನ ಮನೆ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು 2022 ರ ಮಾರ್ಚ್ 31 ರವರೆಗೆ ವಿಸ್ತರಣೆ ಮಾಡಲಾಗಿದೆ

ಈ ವಿಷಯವನ್ನು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿ,
ರಾಜ್ಯದಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶದ ಸರ್ಕಾರಿ ಜಮೀನುಗಳಲ್ಲಿ 2015 ರ ಜನವರಿ 1 ರ ಮೊದಲು ಅನಧಿಕೃತವಾಗಿ ನಿರ್ಮಿಸಿಕೊಂಡ ಮನೆಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸ ಬಹುದಾಗಿದೆ ಎಂದು ಹೇಳಿದರು.‌

ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ಕರ್ನಾಟಕ ಕಂದಾಯ ಕಾಯ್ದೆಯ ಕಲಂ 94 ಸಿ, 94 ಸಿಸಿ ಅನ್ವಯ ಅರ್ಜಿ ಸಲ್ಲಿಸಲು 2019 ರ ಮಾರ್ಚ್ 31 ರವರೆಗೆ ಅವಕಾಶ ನೀಡಲಾಗಿತ್ತು. ಅದನ್ನು ತಿದ್ದುಪಡಿ ಮಾಡಿ 2022 ರ ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ ಎಂದಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!