ಪಾಂಡಪುರ ತಾಲೂಕಿನ ಎರೇಗೌಡನಕೊಪ್ಪಲು ಗ್ರಾಮದ 25 ಮಂದಿಗೆ ಒಂದೇ ದಿನ ಕೊರೊನಾ ಸೋಂಕು ದೃಢಪಟ್ಟಿದೆ.
ಎರೇಗೌಡನಕೊಪ್ಪಲು ಗ್ರಾಮದ ಜನರಿಗೆ ಕಳೆದ ಎರಡು ಮೂರು ದಿನಗಳಿಂದ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದೆ.
ಗ್ರಾಮದ 30 ಮಂದಿ ಸ್ಥಳೀಯ ಆಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದಾರೆ.
ಇದೀಗ 30 ಮಂದಿಯ ಪೈಕಿ 25 ಮಂದಿಗೆ ಕೊರೊನಾ ದೃಢಪಟ್ಟಿದೆ. ಸುಮಾರು 500 ಮಂದಿ ಇರುವ ಈ ಗ್ರಾಮದಲ್ಲಿ 25 ಮಂದಿಗೆ ಕೊರೊನಾ ಸೋಂಕು ದೃಡಪಟ್ಟಿದೆ.
ಈ ಮಾಹಿತಿ ತಿಳಿದ ಶಾಸಕ ಪುಟ್ಟರಾಜು ಹಾಗೂ ತಹಶೀಲ್ದಾರ್ ಪ್ರಮೋದ್ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ, ಯಾರು ಕೂಡ ಭಯ ಭೀತರಾಗಬೇಡಿ, ಎಲ್ಲರೂ ಮನೆಯಲ್ಲಿ ಇರಿ, ಕೊರೊನಾ ನಿಯಮಗಳನ್ನು ಪಾಲಿಸಿ. ಪಾಸಿಟಿವ್ ಬಂದಿರುವವರಿಗೆ ಸೂಕ್ತ ಚಿಕಿತ್ಸೆ ನೀಡುತ್ತೇವೆ ಎಂದು ಧೈರ್ಯ ತುಂಬಿದ್ದಾರೆ. ಇದಲ್ಲದೇ ಈ ವೇಳೆ ಕೊರೊನಾ ಲಸಿಕೆ ಹಾಕಿಸಿಕೊಳ್ಳದವರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ