February 22, 2026

Newsnap Kannada

The World at your finger tips!

SIDDALINGAHI

ಬಂಡಾಯ,ದಲಿತ ಸಾಹಿತಿ ಡಾ. ಸಿದ್ದಲಿಂಗಯ್ಯ ವಿಧಿವಶ

Spread the love

ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಮೇ 4 ರಂದು ಕೊರೊನಾ ಸೋಂಕಿಗೆ ಒಳಗಾಗಿದ್ದ ಸಿದ್ದಲಿಂಗಯ್ಯ ಸುದೀರ್ಘ ಚಿಕಿತ್ಸೆಗೆ ಒಳಗಾಗಿದ್ದರು. ದಲಿತ ಕವಿ ಎಂದೇ ಪ್ರಖ್ಯಾತರಾಗಿದ್ದ ಸಿದ್ದಲಿಂಗಯ್ಯನವರು ಮೂಲತಃ ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದವರು.

ಸಿದ್ದಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿ ಸಮಾನತೆಗಾಗಿ ಕವಿತೆಗಳನ್ನು ರಚಿಸಿದ್ದಾರೆ. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದಾರೆ.

error: Content is protected !!