ಸಿಎಂ ಬದಲಾವಣೆ ಕುರಿತು ಮುಂದೆ ತಿಳಿಸುತ್ತೇನೆ. ನಾಯಕತ್ವ ಬದಲಾವಣೆ ಕುರಿತು ಯಾವುದೇ ಮಾಹಿತಿ ನೀಡಲು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನಿರಾಕರಿಸಿದ್ದಾರೆ.
ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅರುಣ್ ಸಿಂಗ್ ಮುಖ್ಯಮಂತ್ರಿ ಬದಲಾವಣೆ ಕುರಿತು ನನಗೆ ಎಷ್ಟು ತಿಳಿದಿದೆಯೋ ಅಷ್ಟನ್ನೂ ಹೇಳಿದ್ದೇನೆ. ಹೆಚ್ಚಿನ ಮಾಹಿತಿ ತಿಳಿಯಬೇಕಿದೆ. ಈ ಬಗ್ಗೆ ಮುಂದೆ ನಿಮಗೆ ತಿಳಿಸುತ್ತೇನೆ ಎಂದಷ್ಟೇ ಹೇಳಿದರು.
ಕೋವಿಡ್ ಸಂಕಷ್ಟ ಕಾಲದಲ್ಲಿ ಕಾರ್ಯಕರ್ತರು ಸಮರೋಪಾದಿಯಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಜೀವವನ್ನು ಲೆಕ್ಕಿಸದೆ, ಸಾರ್ವಜನಿಕರ ಸೇವೆ ಮಾಡಿದ್ದಾರೆ, ಸೇವೆಯೇ ಸಂಘಟನೆ ಎಂಬ ಮನೋಭಾವದಿಂದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಸೇವೆ ಮಾಡುವುದು ನಮ್ಮ ಪರಮ ಕರ್ತವ್ಯವಾಗಿದೆ. ಆದರೆ ಇಂತಹ ಕಠಿಣ ಪರಿಸ್ಥಿತಿಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದವರು ಆರೋಪ, ಪ್ರತ್ಯಾರೋಪ ಮಾಡುತ್ತಿದ್ದಾರೆ. ಜೆಡಿಎಸ್‍ನವರು ಇಂತಹ ಸಂದರ್ಭದಲ್ಲಿ ಕ್ವಾರಂಟೈನ್‍ನಲ್ಲಿ ಉಳಿದಿದ್ದಾರೆ ಎಂದು ಹರಿಹಾಯ್ದರು.
ಬಿಜೆಪಿ ಕಾರ್ಯಕರ್ತರು ಗಿಡ ನೆಡುವುದು, ಒನ್ ಟೈಪ್ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸುವುದು ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿದ್ದಾರೆ. ಅಲ್ಲದೆ ಮುಂದೆ ಯೋಗ ದಿನಾಚರಣೆಯನ್ನು ಸಹ ಅದ್ಧೂರಿಯಾಗಿ ಮಾಡಬೇಕಿದೆ. ಈ ಕಾರ್ಯಕ್ರಮಗಳ ಕುರಿತು ಸಹ ಕಾರ್ಯಕರ್ತರೊಂದಿಗೆ ಹಾಗೂ ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸಬೇಕಿದೆ ಎಂದು ವಿವರಿಸಿದರು
ಅರುಣ್ ಸಿಂಗ್ ಸ್ವಾಗತಕ್ಕೆ ದೆಹಲಿ ವಿಶೇಷ ಪ್ರತಿನಿಧಿ ಶಂಕರ್ ಗೌಡ ಪಾಟೀಲ್ ಆಗಮಿಸಿದ್ದರು.
- ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ವಾರ ಭಾರೀ ಮಳೆಯ ಮುನ್ಸೂಚನೆ
- ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
- ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
- ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ
More Stories
ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!