February 25, 2026

Newsnap Kannada

The World at your finger tips!

cd

ಜಾರಕಿಹೊಳಿ ಸಿಡಿ ಪ್ರಕರಣ: ಜನಪ್ರತಿನಿಧಿಗಳ ಪೀಠಕ್ಕೆ ಕೇಸ್ ವರ್ಗಾವಣೆ

Spread the love

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ರದ್ದು ಕೋರಿ ಸಂತ್ರಸ್ತ ಯುವತಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜೂನ್ 23ಕ್ಕೆ ಮುಂದೂಡಿರುವ ಹೈಕೋರ್ಟ್ ಪ್ರಕರಣವನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದೆ.

ಜಾರಕಿಹೊಳಿ ದೂರು ಆಧರಿಸಿ ದಾಖಲಿಸಿರುವ ಎಫ್ ಐ ಆರ್ ಹಾಗೂ ಎಸ್ ಐಟಿ ತನಿಖೆ ರದ್ದುಗೊಳಿಸುವಂತೆ ಯುವತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ಜೂನ್ 23ಕ್ಕೆ ಮುಂದೂಡಿದೆ.

ಪ್ರಕರಣ ಆರೋಪಿಯಾಗಿರುವ ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿ ಹಾಗೂ ಪ್ರತಿವಾದಿಯಾಗಿದ್ದಾರೆ.‌ ಈ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ಪೀಠಕ್ಕೆ ವರ್ಗಾವಣೆ ಮಾಡಬೇಕು ಎಂದು ಯುವತಿ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಈ ಮನವಿ ಪುರಸ್ಕಾರಿಸಿದ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಏಕಸದಸ್ಯಪೀಠ ವಿಶೇಷ ಪೀಠಕ್ಕೆ ಪ್ರಕರಣ ವರ್ಗಾವಣೆ ಮಾಡಿದೆ.

error: Content is protected !!